Media Internship 2025: ಮಾಧ್ಯಮ ಅಕಾಡೆಮಿಯಿಂದ ಇಂಟರ್ನ್‌ಶಿಪ್‌ಗಾಗಿ ಅರ್ಜಿ ಆಹ್ವಾನ

By Shwetha Chidambar

Published On:

IST

ಫಾಲೋ ಮಾಡಿ

Karnataka Media Academy Media Internship 2025
Karnataka Media Academy Media Internship 2025

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್‌ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಒಟ್ಟು 24 ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ತರಬೇತಿಗೆ ಬೇಕಾದ ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ -07-07-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25-07-2025

ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಿಶೇಷ ಸೂಚನೆ;

  • ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ವರ್ಗವಾರು ಅಭ್ಯರ್ಥಿಗಳಿಗೆ ತರಬೇತಿ ನೀಡುವ ವಿವರ

  • ಮಹಿಳಾ ಆಯವ್ಯಯದಡಿ – 10 ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.
  • ಪರಿಶಿಷ್ಟ ಜಾತಿ ಉಪಯೋಜನೆಯಡಿ – 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.
  • ಪರಿಶಿಷ್ಟ ಪಂಗಡ ಉಪ ಯೋಜನೆಯಡಿ – 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.

ತರಬೇತಿಯ ಅವಧಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ 2 ತಿಂಗಳ ಅವಧಿಯವರೆಗೆ ತರಬೇತಿಯನ್ನು ನೀಡಲಾಗುತ್ತದೆ.

ಸ್ಟೈಪಂಡ್ ಮೊತ್ತ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000 ರೂ. ಸ್ಟೈಪಂಡ್ ನೀಡಲಾಗುವುದು ಹಾಗೂ ಇಂಟರ್ನ್‌ಶಿಪ್‌ ತರಬೇತಿ ನೀಡುವ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ.

ಆಯ್ಕೆ ವಿಧಾನ:

ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.

How to Apply for Karnataka Media Academy Media Internship 2025

ಅರ್ಜಿ ಸಲ್ಲಿಸುವ ವಿಧಾನ;

  • ಇಂಟರ್ನ್‌ಶಿಪ್‌ ಅರ್ಜಿ 2025 ಗೂಗಲ್ ಫಾರ್ಮ್ https://forms.gle/UgNqDcFs1v6akyAD9ಗೆ ಭೇಟಿ ನೀಡಿ.
  • ಅಭ್ಯರ್ಥಿಗಳು ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ಭರ್ತಿ ಮಾಡಿ. ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.

ನಿಗದಿತ ಕೊನೆ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಶ್ರೀಮತಿ ಸಹನಾ ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Important Direct Links:

Karnataka Media Academy Media Internship 2025 Online Application Form LinkApply Now
Official Websitemediaacademy.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment