ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೆ ಬರುವ ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ ಸಿ ಗ್ರೂಪಿನ ಬ್ಲಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ 02 ಹುದ್ದೆಗಳಾದ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಪೌರಾಡಳಿತ ನಿರ್ದೇಶನಾಲಯ ಕಚೇರಿಗೆ ಜುಲೈ 20ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿ ಕುರಿತದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of Karnataka Municipal Corporation Recruitment 2024
Organization Name – Directorate of Municipal Administration
Post Name – First Grade Revenue Inspector and Second Grade Assistant
Total Vacancy – 02
Application Process: Offline
Job Location – Belagavi, Kalaburgi
Important Dates:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-06-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-07-2024
ಶೈಕ್ಷಣಿಕ ಅರ್ಹತೆ:
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸ್ ಮಾಡಿರಬೇಕು.
ದ್ವಿತೀಯ ದರ್ಜೆ ಸಹಾಯಕರು: ಪಿಯುಸಿ/ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯಸ್ಸಿನ ಮಿತಿ:
ಅಭ್ಯರ್ಥಿಯು 01-01-2024 ರಂದು 18 ವರ್ಷಗಳನ್ನು ಪೂರೈಸಿದ್ದು, ಗರಿಷ್ಠ ವಯೋಮಿತಿ 40 ವರ್ಷಗಳಾಗಿರಬೇಕು.
ಆಯ್ಕೆ ಪ್ರಕ್ರಿಯೆ:
ವಿದ್ಯಾರ್ಹತೆ ಮತ್ತು ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಪರಿಗಣಿಸಲಾಗುತ್ತದೆ.
ಬೇಕಾದ ದಾಖಲಾತಿಗಳು:
- ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮತ್ತು ಪದವಿ ಪರೀಕ್ಷೆಗಳ ಅಂಕಪಟ್ಟಿ
- ಹುಟ್ಟಿದ ದಿನಾಂಕ ಪ್ರಮಾಣ ಪತ್ರ (ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಕ್ಯುಮುಲೇಟಿವ್ ದಾಖಲೆ)
- ಜಾತಿ ಪ್ರಮಾಣ ಪತ್ರ
How to Apply for Karnataka Municipal Corporation Notification 2024
ಅರ್ಜಿ ಸಲ್ಲಿಸುವುದು ಹೇಗೆ: ಅರ್ಜಿಗಳನ್ನು ಆಫ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಫಾರ್ಮ್ ಲಭ್ಯವಿದೆ. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಕಚೇರಿಯ ವಿಳಾಸ:
ಆಯ್ಕೆ ಪ್ರಾಧಿಕಾರ ಮತ್ತು ನಿರ್ದೇಶಕರು,
ಪೌರಾಡಳಿತ ನಿರ್ದೇಶನಾಲಯ.
9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ,
ಬಿ.ಆರ್ ಅಂಬೇಡ್ಕರ್ ಬೀದಿ, ಬೆಂಗಳೂರು -560007.
ಸಂಪರ್ಕ ವಿವರಗಳು:
ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ,
9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ,
ಡಾ. ಅಂಬೇಡ್ಕರ್ ವೀದಿ, ಬೆಂಗಳೂರು-560001.
Important Direct Links:
Official Notification & Form PDF | Download |
More Updates | KarnatakaHelp.in |