ಭಾರತೀಯ ಅಂಚೆ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಡಕ್ ಸೇವಕ(GDS) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
10ನೇ ತರಗತಿಯನ್ನು ಉತ್ತಮ ಅಂಕಗಳೊಂದಿಗೆ ಪಾಸ್ ಮಾಡಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು India post GDS online ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆಯನ್ನು ತಿಳಿದುಕೊಂಡು ಆಗಸ್ಟ್ 5ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಅರ್ಹತೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Organization Name – India Post Office Post Name – Gramin Dak Sevak (GDS), BPM & ABPM Total Vacancy – 1940 Posts Application Process: Online Job Location – Karnataka
ನೇಮಕಾತಿಯ ಪ್ರಮುಖ ದಿನಾಂಕಗಳು:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 15, 2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 5, 2024
India Post Office GDS Vacancy 2024 Details:
Karnataka Post Office Gds Recruitment 2024
ಶೈಕ್ಷಣಿಕ ಅರ್ಹತೆ:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಿಡುಗಡೆಗೊಳಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿದಾರರು 10ನೇ (SSLC) ತರಗತಿ ಪಾಸ್ ಮಾಡಿರಬೇಕು.
ವಯೋಮಿತಿ:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 18 ವರ್ಷದಿಂದ 40ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ
SC/ST ಅಭ್ಯರ್ಥಿಗಳಿಗೆ – 5 ವರ್ಷಗಳು OBC ಅಭ್ಯರ್ಥಿಗಳಿಗೆ – 3 ವರ್ಷಗಳು PwD ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ಪ್ರಕ್ರಿಯೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ SSLC ಫಲಿತಾಂಶದ ಆಧಾರದ ಮೇಲೆ ಶರ್ಟ್ ಲಿಸ್ಟ್ ಮಾಡಿ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
ಮೆರಿಟ್ ಪಟ್ಟಿ
ದಾಖಲಾತಿ ಪರಿಶೀಲನೆ
ಸಂಬಳ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ₹12,000 ರಿಂದ ₹16,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ₹100 SC/ST, Ex- servicemen ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
How to apply for Karnataka Post Office GDS Recruitment 2024
ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://indiapostgdsonline.gov.in/
ಹೊಸ ಬಳಕೆದಾರರ ನೋಂದಣಿ: ನೋಂದಣಿ ಲಿಂಕ್ ಕ್ಲಿಕ್ ಮಾಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿಯನ್ನು ನಮೂದಿಸಿ.
ಲಾಗಿನ್: ನಿಮ್ಮ ನೋಂದಾಯಿತ ಇಮೇಲ್ ವಿಳಾಸ ಮತ್ತು ಪಾಸ್‌ವರ್ಡ್ ಬಳಸಿಕೊಂಡು ಲಾಗಿನ್ ಮಾಡಿ.
ಅರ್ಜಿ ಫಾರ್ಮ್ ಭರ್ತಿ ಮಾಡಿ: ಅಗತ್ಯವಿರುವ ಎಲ್ಲಾ ವಿವರಗಳನ್ನು ಒದಗಿಸಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿಸಿ: ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
ಅರ್ಜಿಯನ್ನು ಸಲ್ಲಿಸಿ: ನಿಮ್ಮ ಅರ್ಜಿಯನ್ನು ಖಚಿತಪಡಿಸಿಕೊಂಡು ಸಲ್ಲಿಸಿ.
ಹೆಚ್ಚಿನ ಮಾಹಿತಿಗಾಗಿ:
ಕರ್ನಾಟಕ ಅಂಚೆ ವಲಯ ಕಚೇರಿ ದೂರವಾಣಿ ಸಂಖ್ಯೆ: 080-22228001 (ನಿಮ್ಮ ಪ್ರದೇಶಕ್ಕೆ ನಿರ್ದಿಷ್ಟವಾದ ದೂರವಾಣಿ ಸಂಖ್ಯೆಗಾಗಿ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಿ)