ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 06 ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ(Karnataka Revenue Department Recruitment 2025)ಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಲೆಕ್ಕಪರಿಶೋಧಕ ಅಧಿಕಾರಿ(Audit Officer), ಸಹಾಯಕ ನಿಯಂತ್ರಕ(Assistant Controller) ಸೇರಿ ಒಟ್ಟು 06 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Recruitment Board – Karnataka Revenue Department Post Name – Various Posts Total Vacancy – 40 Application Process – Offline Job Location – All India
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 24-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -05-05-2025
ಹುದ್ದೆಗಳ ವಿವರ:
ಸಹಾಯಕ ನಿಯಂತ್ರಕ – 1
ಲೆಕ್ಕಪರಿಶೋಧನಾ ಅಧಿಕಾರಿ – 1
ಲೆಕ್ಕಪತ್ರ ಅಧೀಕ್ಷಕರು -1
ಕಾನೂನು ಅಧಿಕಾರಿ ಮತ್ತು ಕಾನೂನು ಸಲಹೆಗಾರ – 1
ಆಪ್ತ ಕಾರ್ಯದರ್ಶಿ – 1
ಐಟಿ ಸಿಬ್ಬಂದಿ-2, ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್‌ವರ್ಕಿಂಗ್ ಮ್ಯಾನೇಜರ್ – 1
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
B.com, M.com, LLB, LLM, degree in related discipline.
ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆಯ ಮಾನದಂಡಗಳ ಪ್ರಕಾರ ಅಭ್ಯರ್ಥಿಯ ವಯಸ್ಸಿನ ಮಿತಿ ಇರಬೇಕು.
ಕರ್ನಾಟಕ ಕಂದಾಯ ಇಲಾಖೆಯ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಉಲ್ಲೇಖಿಸಲಾಗಿಲ್ಲ.
How to Apply for Karnataka Revenue Department Recruitment 2025
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
ಅರ್ಜಿ ನಮೂನೆಯಲ್ಲಿ ಸ್ವ ವಿವರಗಳನ್ನು ಭರ್ತಿ ಮಾಡಿ, ಅರ್ಜಿಯೊಂದಿಗೆ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಸೇವೆಯ ಮೂಲಕ ಮೇ 5ನೇ ತಾರೀಖಿನೊಳಗೆ ಕಳುಹಿಸಬೇಕು.
ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ, ಪೋಡಿಯಂ ಬ್ಲಾಕ್, 03 ನೇ ಮತ್ತು 04 ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001
ಹೆಚ್ಚಿನ ಮಾಹಿತಿಗಾಗಿ – ದೂರವಾಣಿ ಸಂಖ್ಯೆ 080-29565353, 29566556, 29604556 ಅನ್ನು ಸಂಪರ್ಕಿಸಬಹುದು.