Karnataka Sangeeta Nritya Academy Scholarship 2025
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2025-26ನೇ ಸಾಲಿನಲ್ಲಿ ಕಲಾಕ್ಷೇತ್ರದಲ್ಲಿ ಅಭ್ಯಸಿಸುತ್ತಿರುವ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲು ಕನ್ನಡ ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿದೆ. ಅರ್ಹರಿಗೆ ತಲಾ 10,000 ರೂ. ಮೊತ್ತದ ಶಿಷ್ಯವೇತನ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಆಯಾ ಜಿಲ್ಲೆಯ ಸಂಸೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಡಿ.20 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅಕಾಡೆಮಿ ಹೊರಡಿಸಿದ ಪ್ರಕಟಣೆ ತಿಳಿಸಿದೆ.
ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 16 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 24 ವರ್ಷಗಳು
ಆಯ್ಕೆ ವಿಧಾನ:
ಅಭ್ಯರ್ಥಿಗಳು ತಮ್ಮ (ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ) ಆಯಾ ಕಲಾ ಪ್ರಕಾರಕ, ಅನುಗುಣವಾಗಿ ಅಭ್ಯರ್ಥಿಗಳು ಚಿತ್ರೀಕರಿಸಿ, ಕಳುಹಿಸಿಕೊಟ್ಟಿರುವ ಪೆನ್ ಡ್ರೈವ್ ಅನ್ನು ತೀರ್ಪುಗಾರರು ಪರಿಶೀಲಿಸಿ ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಸದರಿ ಶಿಷ್ಯವೇತನದ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು.
• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಅಗತ್ಯ ದಾಖಲಾತಿಗಳು ಹಾಗೂ ಅಭ್ಯರ್ಥಿಗಳ ಕಲಾ ಪ್ರಕಾರಕ ಅನುಗುಣವಾಗಿ ಮೊಬೈಲ್/ಕ್ಯಾಮೆರಾದಲ್ಲಿ ವಿಡಿಯೋವನ್ನು ಚಿತ್ರೀಕರಿಸಿ, ಪೆನ್ ಡ್ರೈವ್ ನಲ್ಲಿ ಅಳವಡಿಸಿ
• ಪೆನ್ ಡ್ರೈವ್ ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರರ್ ಅಂಚೆ ಮೂಲಕ ಅಥವಾ ಖುದ್ದಾಗಿ ಈ ಕೆಳಗಿನ ವಿಳಾಸಕ್ಕೆ ಡಿಸೆಂಬರ್ 20ರೊಳಗೆ ತಲುಪುವಂತೆ ಕಳುಹಿಸಬೇಕು.
ವಿಳಾಸ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕಾರ್ಯಾಲಯ ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002
Shivanna