ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025 ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕ SSLC ಪರೀಕ್ಷೆ 2025 ಅನ್ನು ನಡೆಸಿತ್ತು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ ಒಟ್ಟು 8,96,447 ವಿದ್ಯಾರ್ಥಿಗಳು, 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು. ಪ್ರಸ್ತುತ ಎಲ್ಲ ವಿಷಯಗಳ ಪರೀಕ್ಷೆಗಳು ಮುಗಿದಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಕರ್ನಾಟಕ SSLC ಪರೀಕ್ಷೆ 2025 ರ ಎಲ್ಲ ವಿಷಯವಾರು ಕೀ ಉತ್ತರ(Karnataka SSLC Key Answer 2025)ಗಳನ್ನು ಬಿಡುಗಡೆ ಮಾಡಿದೆ.
ಕರ್ನಾಟಕ SSLC ಪರೀಕ್ಷೆ 2025 ರ ವಿಷಯವಾರು ಕೀ ಉತ್ತರಗಳನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡುವ ಲಿಂಕ್ ಹಾಗೂ ವಿಧಾನದ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಬಿಡುಗಡೆ ಮಾಡಿರುವ ಕರ್ನಾಟಕ SSLC ಪರೀಕ್ಷೆ 2025 ರ ವಿಷಯವಾರು ಉತ್ತರಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಅಧಿಕೃತ ವೆಬ್ ಸೈಟ್ kseab.karnataka.gov.in ಮೂಲಕ ಸಲ್ಲಿಸಬಹುದು.
ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಆಕ್ಷೇಪಣೆ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ಸಲ್ಲಿಸಲು ಏಪ್ರಿಲ್ 6 ಸಂಜೆ 5.30 ರೊಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ತಿಳಿಸಲು ಮಾಹಿತಿಯನ್ನು ನಿಮ್ಮ ಆಯಾ ಜಿಲ್ಲೆಗಳಲ್ಲಿ ಪ್ರಚಾರ ಮಾಡಬೇಕು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
How to Download Karnataka SSLC Key Answer 2025
ಕರ್ನಾಟಕ SSLC ಪರೀಕ್ಷೆ 2025 ರ ಉತ್ತರ ಕೀಲಿಯನ್ನು ಡೌನ್ಲೋಡ್ ಮಾಡುವುದು ಹೇಗೆ ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿ.
ಮುಖಪುಟದಲ್ಲಿ ಇತ್ತೀಚಿನ ಸುದ್ದಿ ವಿಭಾಗಕ್ಕೆ ಹೋಗಿ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 2025 ರ ಪ್ರಮುಖ ವಿಷಯವಾರು ಕೀಲಿ ಉತ್ತರ ಹಾಗೂ ಉತ್ತರಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಎಂದು ಬರೆದಿರುವ ಲಿಂಕ್ ಒತ್ತಿ.
ನಂತರ ಉತ್ತರ ಕೀಲಿಯನ್ನು ವೀಕ್ಷಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ.
Yhhhhh
Nagesh Basavaraj
Tengli tq chitapur Dist
Kalburgi