ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ್ದ 10ನೇ ತರಗತಿಯ ಫಲಿತಾಂಶವನ್ನು(Karnataka SSLC Supplementary Result 2024) ಜುಲೈ 10, 2024 ರಂದು ಬೆಳಿಗ್ಗೆ 11:30 ಕ್ಕೆ ಬಿಡುಗಡೆ ಮಾಡುತ್ತದೆ.
ತಮ್ಮ ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗಳು ಜೂನ್ 14ರಿಂದ ಜೂನ್ 24ರ ವರೆಗೆ ಕರ್ನಾಟಕದದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಫಲಿತಾಂಶವನ್ನು ವೀಕ್ಷಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಪೂರಕ ಪರೀಕ್ಷೆಯ ಫಲಿತಾಂಶದ ವಿವರಗಳನ್ನು ಪಡೆದುಕೊಳ್ಳಬಹುದು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ಫಲಿತಾಂಶವನ್ನು ಜುಲೈ 10, 2024 ರಂದು ಬೆಳಿಗ್ಗೆ 11:30 ಕ್ಕೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. ಡೈರೆಕ್ಟ್ ಲಿಂಕ್ ಲೇಖನದ ಕೊನೆಯಲ್ಲಿ ನೀಡಲಾಗಿದೆ.
ಈ ಹಿಂದೆ ಮಂಡಳಿಯ ಅಧಿಕಾರಿಗಳು ಮೇ 09 ರಂದು ಕರ್ನಾಟಕ 10 ನೇ ತರಗತಿಯ ವಾರ್ಷಿಕ ಫಲಿತಾಂಶಗಳನ್ನು ಪ್ರಕಟಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ಮೂಲಕ ಮತ್ತೊಂದು ಅವಕಾಶವನ್ನು ನೀಡಲಾಗಿತ್ತು. ಅಧಿಕೃತ ವೆಬ್‌ಸೈಟ್‌ಗಳಾದ www.karresults.nic.in ಮತ್ತು www.kseab.karnataka.gov.in ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ. ಈ ಲೇಖನದಲ್ಲಿ ನಾವು 10ನೇ ತರಗತಿಯ ಪೂರಕ ಪರೀಕ್ಷೆಗಳ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎಂಬುದರ ಕುರಿತು ಮಾಹಿತಿ ತಿಳಿದುಕೊಳ್ಳೋಣ.
How to Check karresults-nic-in 2024 SSLC Supplementary Result 2024
ಆನ್ ಲೈನ್ ಮೂಲಕ SSLC ಪೂರಕ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ…?
• KSEAB ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://kseab.karnataka.gov.in ಅಥವಾ https://karresults.nic.in/
• “SSLC ಪೂರಕ ಫಲಿತಾಂಶ 2024” ಲಿಂಕ್ ಕ್ಲಿಕ್ ಮಾಡಿ
• ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
• ಫಲಿತಾಂಶವು ಪರದೆಯ ಮೇಲೆ ಪ್ರದರ್ಶಿಸುತ್ತದೆ
• ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಮಾಡಿ
Important Direct Links:
SSLC Supplementary (EXAM 2) Result 2024 Direct Link (Live) | Check Here |
Official Website | kseab.karnataka |
More Updates | Karnataka Help.in |