Karnataka TET Exam 2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023 Notification Online Application) ಸಂಬಂಧ ಶಾಲಾ ಶಿಕ್ಷಣ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್ www.schooleducation.kar.nic.in ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆ (Karnataka Teacher Eligibility Test)ಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಲೇಖನದ ಕೊನೆಯಲ್ಲಿ ನೀಡಲಾದ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು, ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ ಸೈಟ್ ಗೆ ಭೇಟಿ ನೀಡಬಹುದು.
Karnataka TET Exam 2023
ORG Name | School Education |
Exam Name | KTET- Karnataka Teacher Eligibility Test |
Exam Date | Sep 03, 2023 |
KTET 2023 Admit Card Date | 23 Aug to 01 Sep |
Official Website | schooleducation.kar.nic.in |
KTET Application Fees:
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023) ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ಅರ್ಜಿ ಶುಲ್ಕವನ್ನ ಅಭ್ಯರ್ಥಿಗಳು ಭರಿಸಬೇಕು.
ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ:
ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿ – 700 ರೂ.
ಪ.ಜಾ./ಪ.ವರ್ಗ/ಪ್ರವರ್ಗ-1 ಮಾತ್ರ: 350 ರೂ.
ಪತ್ರಿಕೆ-1 ಹಾಗೂ ಪತ್ರಿಕೆ- 2 :
ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿ – 1,000 ರೂ.
ಪ.ಜಾ./ಪ.ವರ್ಗ/ಪ್ರವರ್ಗ-1 ಮಾತ್ರ: 500 ರೂ.
Karnataka TET Syllabus and Exam Pattern 2023
KARTET-2023 Notification Exam Qualification 2023
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಬರೆಯಲು ಅಭ್ಯರ್ಥಿಗಳು ನಿರ್ದಿಷ್ಟ ವಾದ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು. ಈ ಪರೀಕ್ಷೆಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು
KTET Paper -1: Minimum Qualification Required: (For Class 1 to 5)
- ಪಿ.ಯು.ಸಿ/ ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ D.EL.Ed. ಕೋರ್ಸಿನ (ಯಾವ ಹೆಸರಿನಿಂದ ಕರೆಯುವರೋ ಆ ಹೆಸರಿನ) ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಕೋರ್ಸಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು, ಅಥವಾ
- ಪಿ.ಯು.ಸಿ / ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು. ಹಾಗೂ ನಾಲ್ಕು ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್‌ನಲ್ಲಿ (B.El.Ed) ತೇರ್ಗಡೆ ಹೊಂದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
- ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ ಡಿಪ್ಲೊಮೊ ಇನ್ ಎಜುಕೇಶನ್ (ವಿಶೇಷ ಶಿಕ್ಷಣ) ತೇರ್ಗಡೆ ಹೊಂದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
- ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ D.EL.Ed. ಕೋರ್ಸಿನ (ಯಾವ ಹೆಸರಿನಿಂದ ಕರೆಯುವರೋ ಆ ಹೆಸರಿನ) ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊ೦ದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
- ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಬಿ.ಇಡಿ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು.
KTET Paper-2: Minimum Qualification Required: (For Class 6 to 8)
- ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ D.EL.Ed ಕೋರ್ಸಿನ (ಯಾವ ಹೆಸರಿನಿಂದ ಕರೆಯುವರೋ ಆ ಹೆಸರಿನ) ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಕೋರ್ಸಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
- ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಬಿ.ಇಡಿ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪದವಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
- ಪಿ.ಯು.ಸಿ/ ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ನಾಲ್ಕು ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್‌ನಲ್ಲಿ (B.El.Ed) ತೇರ್ಗಡೆ ಹೊಂದಿರುವವರು ಅಥವಾ ಕೋರ್ಸಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
- ಪದವಿಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷದ ಬಿ.ಇಡಿ (ವಿಶೇಷ ಶಿಕ್ಷಣ) ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪದವಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು,
Karnataka TET Exam Date And Time
Exam Date | Papers | Exam Time | ಪರೀಕ್ಷಾ ಅವಧಿ |
---|---|---|---|
03/09/2023 | ಪತ್ರಿಕೆ ಪತ್ರಿಕೆ-1 | ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.00 ಗಂಟೆ | 2 ಗಂಟೆ 30 ನಿಮಿಷ |
03/09/2023 | ಪತ್ರಿಕೆ ಪತ್ರಿಕೆ-2 | ಮಧ್ಯಾಹ್ನ 2.00 ರಿಂದ 4.30 ಗಂಟೆ | 2 ಗಂಟೆ 30 ನಿಮಿಷ |
KARTET Instructions 2023
- ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು.
- ಅರ್ಜಿಗಳನ್ನು ದಿನಾಂಕ:05/08/2023 ರೊಳಗೆ ಆನ್‌ಲೈನ್ ಮೂಲಕವೇ ಸಲ್ಲಿಸಬೇಕು.
- ಅಂತಿಮ ದಿನಾ೦ಕದ ನ೦ತರ ಅರ್ಜಿಸಲ್ಲಿಸಲು ಅವಕಾಶ ಇರುವುದಿಲ್ಲ. ಅಂಚೆ ಅಥವಾ ಇನ್ಯಾವುದೇ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಸಹ ಆನ್‌ಲೈನ್ ಮೂಲಕವೇ ಪಡೆಯತಕ್ಕದ್ದು.
- ಪರೀಕ್ಷೆಯ ದಿನದಂದು ತರಬೇಕಾದ ವಸ್ತುಗಳ – ಪ್ರವೇಶ ಪತ್ರ ಮತ್ತು ಒಳ್ಳೆಯ ಗುಣಮಟ್ಟದ ನೀಲಿ / ಕಪ್ಪು ಬಾಲ್ ಪಾಯಿಂಟ್ ಪೆನ್ನುಗಳು.
- ಅಭ್ಯರ್ಥಿಯು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಹಾಜರಾದ ಮಾತ್ರಕ್ಕೆ ಅರ್ಹತೆಯನ್ನು ಪಡೆಯುವುದಿಲ್ಲ.
- ಅಭ್ಯರ್ಥಿಯು ವಿದ್ಯಾರ್ಹತೆ, ಆಯಾ ಗು೦ಪುಗಳಿಗೆ ನಿಗದಿಪಡಿಸಿರುವ ಕನಿಷ್ಠ ಅರ್ಹತಾ ಅಂಕಗಳನ್ನು ಪಡೆಯತಕ್ಕದ್ದು.
- ಸದರಿ ಅರ್ಹ ಪರೀಕ್ಷೆಯು ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ನಿಯಮಗಳು, ಆದೇಶಗಳು ಮತ್ತು ತಿದ್ದುಪಡಿಗೆ ಒಳಪಟ್ಟಿರುತ್ತದೆ.
- ಅಭ್ಯರ್ಥಿಗಳು ಸಲ್ಲಿಸಿದ ಆನ್‌ಲೈನ್ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಶುಲ್ಕ ಪಾವತಿಸಿದ ಚಲನ್ ಪ್ರತಿ ಹಾಗೂ ಇತರೆ ದಾಖಲೆಗಳನ್ನು ಸದರಿ ಶಿಕ್ಷಕರ ಅರ್ಹತಾ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ಸುರಕ್ಷಿತವಾಗಿ ಇಟ್ಟುಕೊಳ್ಳತಕ್ಕದ್ದು.
- OMR ಉತ್ತರಪತ್ರಿಕೆಯಲ್ಲಿನ ತಿದ್ದುಪಡಿಗಾಗಿ ವೈಟ್‌ನರ್‌ನ(whitener) ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ.
Important Date
IMP Name | IMP Dates |
---|---|
KARTET-2023 Online Application Start Date | 14 July 2023 |
Application Last Date | 05 Aug 2023 |
Last date for Payment of Fee | 05 Aug 2023 |
KARTET Admit Card Release Date | 23/08/2023 To 01/09/2023 |
KARTET 2023 Exam Date | 03 Sep 2023 |
How to Apply KARTET 2023 Exam
- ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ (Given Link Below)
- ನಂತರ Home ಪೇಜ್ ನಲ್ಲಿ “Online Application for Karnataka Teachers Eligibility Test-2023” ಲಿಂಕ್‌ನ್ನು ಕ್ಲಿಕ್ ಮಾಡಿದಾಗ ಮತ್ತೊಂದು ವೆಬ್‌ಪೇಜ್ ತೆರೆದುಕೊಳ್ಳುತ್ತದೆ.
- ಈಗಾಗಲೇ Register ಆಗಿದ್ದರೆ ಲಾಗಿನ್ ಆಗಿ ಅಥವಾ New User ಆಗಿದ್ದರೆ ನಿಮ್ಮ ಮೊಬೈಲ್ ನಂಬರ್, ಇ-ಮೇಲ್ ಮೂಲಕ ಹೊಸದು ರಚಿಸಿ.
- ನಂತರ ನಿಮ್ಮ ವೈಯಕ್ತಿಕ ದಾಖಲೆ, ಶೈಕ್ಷಣಿಕ ದಾಖಲೆಗಳು ಹಾಗೂ ಅಲ್ಲಿ ಕೇಳಲಾದ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಕೊನೆಗೆ ಅರ್ಜಿ ಶುಲ್ಕ ತುಂಬಿ, ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.