2025ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಪರೀಕ್ಷೆಯನ್ನು ಡಿ.7ರಂದು ನಡೆಸಿ, ಅಂದೇ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆಗೊಳಿಸಿತ್ತು. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಡಿ.09 ರಿಂದ 12ರವರೆಗೆ ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ತಂಡವು ಪರಿಶೀಲಿಸಿ ನೀಡಿದ ಶಿಫಾರಸ್ಸುಗಳನ್ವಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಅಂತಿಮ ಕೀ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://sts.karnataka.gov.in/TET ನಲ್ಲಿ ಬಿಡುಗಡೆ ಮಾಡಿದೆ.




What
Super