ಕರ್ನಾಟಕ ಲೋಕಸೇವಾ ಅಯೋಗ ಇಂದು ನಡಿಸಿದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಇಂದು ನಡೆಸಲಾಗಿದ್ದು, ಈ ಪರೀಕ್ಷಗೆ ಸಂಬಂಧಿಸಿದ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ.
ಇಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, 214 ಸರ್ಕಾರಿ, 189 ಅನುದಾನಿತ ಹಾಗೂ 161 ಖಾಸಗಿ ಶಾಲಾ- ಕಾಲೇಜುಗಳು ಸೇರಿ ಒಟ್ಟು 564 ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಿತು. ಈ ಪರೀಕ್ಷೆಯನ್ನು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಈ ಪರೀಕ್ಷೆಯನ್ನು ನಡೆಸಲಾಯಿತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೀ ಉತ್ತರಗಳನ್ನು ಡೌನ್‌ಲೋಡ್ ಮಾಡಿಕೊಂಡು ತಮ್ಮ ಅಂಕಗಳನ್ನು ಅಂದಾಜು ಮಾಡಬಹುದಾಗಿದೆ ಮತ್ತು ಸರಿ ಉತ್ತರಗಳನ್ನು ತಿಳಿದುಕೊಳ್ಳಬಹುದು.
ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು KPSC ಅಧಿಕೃತ ವೆಬ್‌ಸೈಟ್‌ನಲ್ಲಿ KAS 2024ರ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರಗಳ PDF ಅನ್ನು ಪಡೆದುಕೊಳ್ಳಬಹುದು. ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ https://kpsc.kar.nic.in ಭೇಟಿ ನೀಡಿ, ಲಾಗಿನ್ ವಿವರಗಳನ್ನು ನಮೂದಿಸುವ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಲೇಖನದಲ್ಲಿ KPSC KAS Exam Key Answers 2024 ಪೂರ್ವಭಾವಿ ಪರಿಚಯ ಅತಿ ಉತ್ತರಗಳನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು, ಗಮನವಿಟ್ಟು ಓದಿರಿ.