ಗುಡ್ ನ್ಯೂಸ್: ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

Published on:

2025-26ನೇ ಸಾಲಿನಲ್ಲಿ ಕಾಶಿ ಯಾತ್ರೆ(Kashi Theertha Yatra Scheme) ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಕಾಶಿ ಯಾತ್ರೆ ಕೈಗೊಂಡ 30,000 ಯಾತ್ರಾರ್ಥಿಗಳಿಗೆ ತಲಾ 5,000ರೂ.ಗಳ ಸಹಾಯಧನವನ್ನು ನೀಡಲಾಗುತ್ತದೆ. ಕಾಶಿ ಯಾತ್ರೆ ಕೈಗೊಂಡ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಜುಲೈ 15, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 15, 2025

ವಯೋಮಿತಿ:

18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

  • ಯಾತ್ರಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು.
  • ಪ್ರಥಮ ಬಾರಿಗೆ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಮಾತ್ರ ಸಹಾಯಧನ ನೀಡಲಾಗುವುದು.
  • ಕಾಶಿಯಾತ್ರೆ ಕೈಗೊಂಡಿರುವುದನ್ನು ದೃಢೀಕರಿಸುವ ಸಲುವಾಗಿ ಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಮುಂಬದಿಯಲ್ಲಿ ಯಾತ್ರಾರ್ಥಿಗಳ ಛಾಯಾಚಿತ್ರ (Photo)/GPS location) ಹೊಂದಿರುವ ಛಾಯಾಚಿತ್ರವನ್ನು ಮೊಬೈಲ್ ನಲ್ಲಿ ತೆಗೆದುಕೊಂಡಿರಬೇಕು.

ಸಹಾಯಧನದ ಮೊತ್ತ:

ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಕಾಶಿ ಯಾತ್ರೆಯನ್ನು ಕೈಗೊಂಡ 30000 ಯಾತ್ರಾರ್ಥಿಗಳಿಗೆ ತಲಾ 5000 ರೂ. ಸಹಾಯಧನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು

  • ಯಾತ್ರಾರ್ಥಿಗಳು ತಮ್ಮ ಆಧಾರ್ ಕಾರ್ಡನ ಎರಡೂ ಕಡೆ (both sides) ತಪ್ಪದೇ ಅಪ್‌ಲೋಡ್ ಮಾಡಬೇಕು.
  • ಚುನಾವಣಾ ಗುರುತಿನ ಚೀಟಿ/ರೇಷನ್ ಕಾರ್ಡ್
  • ಯಾತ್ರಾರ್ಥಿಗಳು ಕಾಶಿಗೆ ಪ್ರಯಾಣಿಸಿದ ಕುರಿತು ಟಿಕೆಟ್ ಅಪ್‌ಲೋಡ್ ಮಾಡಬೇಕು.
  • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ, ಈ ಬಗ್ಗೆ ಯಾತ್ರಾರ್ಥಿಗಳು 100ರೂ.ಗಳ ಛಾಪಾ ಕಾಗದ (E-Stamp Paper)ದಲ್ಲಿ ಈ ಹಿಂದೆ ಸಹಾಯಧನವನ್ನು ಪಡೆದಿಲ್ಲವೆಂದು ಸ್ವದೃಢೀಕರಿಸಿ ನೋಟರಿ ಮೊಹರು ಮತ್ತು ಸಹಿಯೊಂದಿಗೆ ದೃಢೀಕರಣವನ್ನು ಅಪ್ ಲೋಡ್ ಮಾಡಬೇಕು.
  • ಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಮುಂಬದಿಯಲ್ಲಿ ಯಾತ್ರಾರ್ಥಿಗಳ ಛಾಯಾಚಿತ್ರ (Photo)/GPS location) ಹೊಂದಿರುವ ಛಾಯಾಚಿತ್ರವನ್ನು ಅಪ್ ಲೋಡ್ ಮಾಡಬೇಕು.
  • ಯಾತ್ರಾರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಅವರ ಬ್ಯಾಂಕ್ ಖಾತೆಯು ಚಾಲ್ತಿಯಲ್ಲಿರಬೇಕು, ಸದರಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಮಾಡಿಸಿರಬೇಕು.

ವಿಶೇಷ ಸೂಚನೆ

ಸರ್ಕಾರದ ಮಾರ್ಗಸೂಚಿಯನ್ವಯ ಆಯಾಯಾ ವರ್ಷದ ಅನುದಾನವನ್ನು ಆಯಾಯಾ ವರ್ಷ ಪಾವತಿಸಲು ಅವಕಾಶವಿರುವುದರಿಂದ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಅನ್ನು ನಿಗದಿತ ದಿನಾಂಕದೊಳಗೆ ಮಾಡಿಸದಿದ್ದಲ್ಲಿ ತಾವೇ ನೇರ ಜವಾಬ್ದಾರರು.

ಅವಧಿ ಮುಗಿದ ನಂತರ ಸಹಾಯಧನ ಕೋರಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ..

How to Apply for Kashi Theertha Yatra Scheme Subsidy Online Application Form 2025

ಅರ್ಜಿ ಸಲ್ಲಿಸುವ ವಿಧಾನ;

  • ಸೇವಾ ಸಿಂಧು ಅಧಿಕೃತ ಪೋರ್ಟಲ್ https://sevasindhuservices.karnataka.gov.in/ಗೆ ಭೇಟಿ ನೀಡಿ.
  • ಇ-ಮೇಲ್ ಐಡಿ / ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ನಮೂದಿಸಿ ಸಲ್ಲಿಸಿ.
  • 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಕಾಶಿ ಯಾತ್ರೆ ಕೈಗೊಂಡ 30000 ಯಾತ್ರಾರ್ಥಿಗಳಿಗೆ ಸಹಾಯಧನ ಅರ್ಜಿ ನಮೂನೆ ಆಯ್ಕೆ ಮಾಡಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ. ಭಾವಚಿತ್ರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಕೊನೆಯಲ್ಲಿ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಿ. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Kashi Theertha Yatra Scheme Subsidy 2025 Online Application Form LinkApply Now
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “ಗುಡ್ ನ್ಯೂಸ್: ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ”

  1. 𝗪𝗲 𝗵𝗮𝘃𝗲 𝘁𝗿𝗮𝘃𝗲𝗹𝗲𝗱 𝗱𝘂𝗿𝗶𝗻𝗴 𝗳𝗲𝗯𝗿𝘂𝗮𝗿𝘆 𝟮𝟬𝟮𝟲 𝘁𝗼 𝗸𝗮𝘀𝗵𝗶. 𝗔𝗿𝗲 𝘄𝗲 𝗲𝗹𝗶𝗴𝗶𝗯𝗹𝗲 𝘁𝗼 𝗮𝗽𝗽𝗹𝘆 𝗳𝗼𝗿 𝘀𝘂𝗯𝘀𝗶𝗱𝘆? 𝗞𝗶𝗻𝗱𝗹𝘆 𝗶𝗻𝗳𝗼𝗿𝗺 𝘂𝘀 𝘀𝗼𝗼𝗻

    Reply

Leave a Comment