KCET Dress Code 2023 – ಪರೀಕ್ಷೆಗೆ ಹಾಜರಾಗುವ Male ಹಾಗೂ Female ಅಭ್ಯರ್ಥಿಗಳಿಗೆ ಮುಖ್ಯ ಸೂಚನೆಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ಅವುಗಳಲ್ಲಿ ಅತೀ ಮುಖ್ಯ ಸೂಚನೆಗಳನ್ನು ಕೆಳಗೆ ನೀಡಲಾಗಿದೆ ಓದಿ
KCET ಪರೀಕ್ಷೆ.. ಇದಕ್ಕೆ ಅವಕಾಶವಿಲ್ಲ
☞ ಡಿಜಿಟಲ್ ವಾಚ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳು ಬ್ಯಾನ್
☞ ಹಿಜಾಬ್‌ಗೆ ನಿಷೇಧ
☞ ಫುಲ್ ಆರ್ಮ್ ಶರ್ಟ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ
☞ ಪರೀಕ್ಷಾ ಹಾಲ್‌ಗೆ ಆಭರಣಗಳನ್ನು ತೊಟ್ಟು ಬರುವ ಹಾಗಿಲ್ಲ
☞ ನಿಗದಿತ ಸಮಯದೊಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿರಬೇಕು
☞ ಹಾಲ್ ಟಿಕೆಟ್ ಜೊತೆ ಯಾವುದಾದರು ಒಂದು ಐಡೆಂಟಿಟಿ ಕಾರ್ಡ್ ತರಬೇಕು
☞ ಕಾಲ್ಕೂಲೇಟರ್ ಅಥವಾ ಲಾಗ್ ಟೇಬಲ್‌ಗೆ ನಿಷೇಧ
1. ಓಎಂಆರ್ ಉತ್ತರ ಪತ್ರಿಕೆಯು ದ್ವಿಪ್ರತಿಯ ಕಾರ್ಬನ್ ರಹಿತ ಪತ್ರಿಕೆಯಾಗಿರುತ್ತದೆ. ವಿದ್ಯಾರ್ಥಿಯು ನೀಲಿ ಅಥವ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ನ್ನು ಮಾತ್ರ ಉಪಯೋಗಿಸಬೇಕು. ಎರಡು ಅಥವಾ ಮೂರಕ್ಕಿಂತ ಹೆಚ್ಚು ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ನನ್ನು ಮಾತ್ರ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗಬಾರದು. ಪರೀಕ್ಷಾ ಕೊಠಡಿಯ ಒಳಗಡೆ ಪೆನ್ಸಿಲ್ ಅನ್ನು ತೆಗೆದುಕೊಂಡು ಹೋಗಬಾರದು.
2.ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳಿಗೆ ನೀಡಲಾಗುವ ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಯು ತಮ್ಮ ಹೆಸರನ್ನು ದೊಡ್ಡ ಅಕ್ಷರಗಳಲ್ಲಿ ತಪ್ಪಿಲ್ಲದೆ ಬರೆಯಬೇಕು.
3.ನಂತರ ಅಭ್ಯರ್ಥಿಯು ಪ್ರವೇಶ ಪತ್ರದ (CET NO.) ಸಂಖ್ಯೆಯನ್ನು ಬರೆದು ಸಂಬಂಧಿಸಿದ ವೃತ್ತಗಳನ್ನು ಮಾಡಬೇಕು.
4.ನಂತರ ಅಭ್ಯರ್ಥಿಯು ಪ್ರಶ್ನೆಪತ್ರಿಕೆಯ ವರ್ಷನ್ ಕೋಡ್ ಅನ್ನು ತಪ್ಪಿಲ್ಲದೆ ಬರೆದು ಸಂಬಂಧಿಸಿದ ವೃತ್ತಗಳನ್ನು ಶೇಡ್ ಮಾಡಬೇಕು.
5.ವರ್ಷನ್ ಕೋಡ್ ಮತ್ತು ಕ್ರಮ ಸಂಖ್ಯೆಯನ್ನು ನಾಮಿನಲ್ ರೋಲ್‌ನಲ್ಲಿ ತಪ್ಪಿಲ್ಲದೆ ಬರೆಯಬೇಕು.
6.ತಮಗೆ ನೀಡುವ ಓ.ಎಂ.ಆರ್. ಉತ್ತರ ಪತ್ರಿಕೆಯ ಕೆಳಭಾಗದ ನಿಗದಿತ ಜಾಗದಲ್ಲಿ ಅಭ್ಯರ್ಥಿಯು ಪೂರ್ಣ ಸಹಿ ಮಾಡಬೇಕು.
7.ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ಟೈಮಿಂಗ್ ಮಾರ್ಕನ್ನು ತಿದ್ದಬಾರದು /ಹಾಳುಮಾಡಬಾರದು /ಅಳಿಸಬಾರದು.
8.ಮೂರನೇ ಬೆಲ್ ಜೆ. 10.41 / ಪು. 2.40 ಕ್ಕೆ ಆಗುತ್ತದೆ. ಅಲ್ಲಿಯವರೆಗೂ,
- ಪ್ರಶ್ನೆ ಪತ್ರಿಕೆಯ ಬಲಭಾಗದಲ್ಲಿರುವ ಸೀಲ್ ಅನ್ನು ತೆಗೆಯಬಾರದು.
- ಪ್ರಶ್ನೆ ಪತ್ರಿಕೆಯ ಒಳಗಡೆ ಇರುವ ಪ್ರಶ್ನೆಗಳನ್ನು ನೋಡಲು ಪ್ರಯತ್ನಿಸಬಾರದು.
- ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಉತ್ತರಿಸಲು ಪ್ರಾರಂಭಿಸಬಾರದು.
9.ಪ್ರಶ್ನೆ ಪತ್ರಿಕೆಯಲ್ಲಿ ಒಟ್ಟು 60 ಪ್ರಶ್ನೆಗಳಿದ್ದು, ಪ್ರತಿ ಪ್ರಶ್ನೆಗೂ 4 ಬಹು ಆಯ್ಕೆ ಉತ್ತರಗಳು ಇರುತ್ತವೆ.
10.ಮೂರನೇ ಬೆಲ್ ಅಂದರೆ ಬೆ. 10.40ರ / 2.40 ರ ನಂತರ ಪ್ರಶ್ನೆ ಪತ್ರಿಕೆಯ ಬಲಭಾಗದಲ್ಲಿರುವ ಸೀಲ್ ತೆಗೆದು ಈ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಪುಟಗಳು ಮುದ್ರಿತವಾಗಿಲ್ಲದೇ ಇರುವುದು ಕಂಡು ಬಂದಲ್ಲಿ ಅಥವಾ ಹರಿದು ಹೋಗಿದ್ದಲ್ಲಿ ಅಥವಾ ಯಾವುದೇ ಐಟಂಗಳು / ಪ್ರಶ್ನೆಗಳು ಬಿಟ್ಟುಹೋಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು, ರೀತಿ ಆಗಿದ್ದರೆ ಕೂಡಲೇ ಕೊಠಡಿ ಮೇಲ್ವಿಚಾರಕರಿಂದ ನಂತರ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಉತ್ತರಿಸಲು ಪ್ರಶ್ನೆಪತ್ರಿಕೆಯನ್ನು ಬದಲಾಯಿಸಿಕೊಳ್ಳಿ. ನಂತರ ಪ್ರಾರಂಭಿಸುವುದು.
11.ಮುಂದಿನ 70 ನಿಮಿಷಗಳಲ್ಲಿ
- ಪ್ರತಿ ಪ್ರಶ್ನೆಯನ್ನು ಎಚ್ಚರಿಕೆಯಿಂದ ಓದಿ.
- ಪ್ರತಿ ಪ್ರಶ್ನೆಯ ಕೆಳಗೆ ಕೊಟ್ಟಿರುವ ನಾಲ್ಕು ಬಹು ಆಯ್ಕೆಯ ಉತ್ತರಗಳಲ್ಲಿ ಸರಿಯಾದ ಉತ್ತರವನ್ನು ಆಯ್ಕೆ ಮಾಡಿ.
•ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗೆ ಅನುಗುಣವಾಗಿರುವ ಸರಿ ಉತ್ತರವನ್ನು ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಅದೇ ಕ್ರಮ ಸಂಖ್ಯೆಯ ಮುಂದೆ ನೀಡಿರುವ ಸಂಬಂಧಿಸಿದ ವೃತ್ತವನ್ನು ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್‌ನಿಂದ ಸಂಪೂರ್ಣ ತುಂಬುವುದು.
Link Name | IMP Links |
---|---|
KCET Dress code 2023 and Instructions PDF | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | KEA Official |
Karnataka Help | Karnataka Help.in |