KCET Dress Code and Guidelines 2025: ಪುರುಷ/ಮಹಿಳಾ ವಸ್ತ್ರ ಸಂಹಿತೆ ಹಾಗೂ ಸೂಚನೆಗಳ ಬಗ್ಗೆ ಮಾಹಿತಿ ಇಲ್ಲಿದೆ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

Updated On:

ಫಾಲೋ ಮಾಡಿ

KCET Dress Code and Guidelines 2025 for Male and Female
KCET Dress Code and Guidelines 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ್ಯಂತ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 15 ರಿಂದ 17 ರವರಿಗೆ ನಡೆಸಲಾಗುತ್ತದೆ. ಆದ್ದರಿಂದ ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ(KCET Dress Code and Guidelines 2025) ಹೇಗಿರಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಪರೀಕ್ಷೆಯನ್ನು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಹಾಗೂ ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಅನ್ನು ಜಾರಿ ಮಾಡಲಾಗಿದೆ. ಈ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

KCET Exam Day Guidelines 2025

ಪರೀಕ್ಷಾ ದಿನದ ಮುಖ್ಯ ಸೂಚನೆಗಳು ಈ ಕೆಳಗಿನಂತಿವೆ;

• ವಿದ್ಯಾರ್ಥಿಯು ನೀಲಿ ಅಥವ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ನ್ನು ಮಾತ್ರ ಉಪಯೋಗಿಸಬೇಕು.

• ಎರಡು ಅಥವಾ ಮೂರಕ್ಕಿಂತ ಹೆಚ್ಚು ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ಹಾಗೂ ಪೆನ್ಸಿಲ್ ಅನ್ನು ಪರೀಕ್ಷಾ ಕೊಠಡಿಯ ಒಳಗಡೆ ತೆಗೆದುಕೊಂಡು ಹೋಗಬಾರದು.

• ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳಿಗೆ ನೀಡಲಾಗುವ ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಯು ತಮ್ಮ ಹೆಸರನ್ನು ದೊಡ್ಡ ಅಕ್ಷರಗಳಲ್ಲಿ ತಪ್ಪಿಲ್ಲದೆ ಬರೆಯಬೇಕು.

• ಅಭ್ಯರ್ಥಿಯು ಪ್ರವೇಶ ಪತ್ರದ (CET No.) ಸಂಖ್ಯೆ , ವರ್ಷನ್ ಕೋಡ್ ಹಾಗೂ ಕ್ರಮ ಸಂಖ್ಯೆಯನ್ನು ಬರೆದು ಸಂಬಂಧಿಸಿದ ವೃತ್ತಗಳನ್ನು ಶೇಡ್ ಮಾಡಬೇಕು.

• ನೀಡಲಾಗುವ ಓ.ಎಂ.ಆರ್. ಉತ್ತರ ಪತ್ರಿಕೆಯ ಕೆಳಭಾಗದ ನಿಗದಿತ ಜಾಗದಲ್ಲಿ ಅಭ್ಯರ್ಥಿಯ ಪೂರ್ಣ ಸಹಿ. ಮಾಡಬೇಕು.

• ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ಟೈಮಿಂಗ್ ಮಾರ್ಕನ್ನು ತಿದ್ದಬಾರದು/ ಅಳಿಸಬಾರದು.

• ಮೂರನೇ ಬೆಲ್ ಆಗುವವರೆಗೂ ಓ.ಎಂ.ಆರ್ ಪತ್ರಿಕೆಯನ್ನು ತೆರೆಯಬಾರದು ಹಾಗೂ ಉತ್ತರಿಸಬಾರದು.

• ಪ್ರಶ್ನೆ ಪತ್ರಿಕೆಯಲ್ಲಿ ಒಟ್ಟು 10 ಪ್ರಶ್ನೆಗಳಿದ್ದು, ಪ್ರತಿ ಪ್ರಶ್ನೆಗೂ 4 ಬಹು ಆಯ್ಕೆ ಉತ್ತರಗಳು ಇರುತ್ತವೆ. ತಪ್ಪು ಉತ್ತರಗಳಿಗೆ ಅಂಕಗಳನ್ನು ಕಳೆಯುವುದಿಲ್ಲ.

• ಮೂರನೇ ಬೆಲ್ ಬಳಿಕ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಪುಟಗಳು ಮುದ್ರಿತವಾಗಿಲ್ಲದೇ ಇರುವುದು ಕಂಡು ಬಂದಲ್ಲಿ ಅಥವಾ ಹರಿದು ಹೋಗಿದ್ದಲ್ಲಿ ಕೊಠಡಿ ಮೇಲ್ವಿಚಾರಕರಿಂದ ಪ್ರಶ್ನೆಪತ್ರಿಕೆಯನ್ನು ಬದಲಾಯಿಸಿಕೊಳ್ಳಿ. ನಂತರ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಉತ್ತರಿಸಲು ಪ್ರಾರಂಭಿಸಿ.

ಪರೀಕ್ಷಾ ಕೊಠಡಿಯಲ್ಲಿ ನಿಷೇಧಿಸಲಾದ ವಸ್ತುಗಳು:

  • ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು. ಮೊಬೈಲ್ ಫೋನ್, ಬ್ಲೂಟೂಥ್, ಸೈಡ್ ರೂಲ್ಸ್, ಕ್ಯಾಲ್ ಕ್ಯುಲೇಟರ್, ವೈಟ್ ಪ್ಯೂಯಿಡ್, ವೈರ್‌ಲೆಸ್ ಸೆಟ್ಸ್, ಪೇಪರ್ ಚೀಟಿ, ಬುಕ್ಸ್ / ಪುಸ್ತಕ ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಲಾಗಿದೆ.

ಈ ಮೇಲಿನ ಯಾವುದೇ ವಸ್ತುಗಳನ್ನು ಸಂರಕ್ಷಿಸಿಡಲು ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಇರುವುದಿಲ್ಲ.

  • ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಕೈಗಡಿಯಾರವನ್ನು ಕಟ್ಟಿಕೊಂಡು ಹೋಗುವಂತಿಲ್ಲ.

KCET Dress Code For Male and Female 2025

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಡ್ರೆಸ್ ಕೋಡ್ ಈ ಕೆಳಗಿನಂತಿದೆ;

  • ಅಭ್ಯರ್ಥಿಗಳು ಮೊಣಕೈವರೆಗೆ ಬರುವಂತಹ ಅರ್ಧ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಬಹದು, ಕಿವಿ. ತಲೆ ಮುಚ್ಚುವಂತಹ ವಸ್ತ್ರವನ್ನು ನಿಷೇಧಿಸಲಾಗಿದೆ.

ಪುರುಷ ಅಭ್ಯರ್ಥಿಗಳು(KCET Dress Code For Male 2025): ಅರ್ಧತೋಳಿನ ಶರ್ಟ್‍ಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಸಾಧಾರಣ ಶರ್ಟ್, ಟೀ ಶರ್ಟ್ ಧರಿಸಬೇಕು. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಜೇಬುಗಳು ಇಲ್ಲದಿರುವ, ಕಮ್ಮಿ ಜೇಬಿಗಳಿರುವ ಪ್ಯಾಂಟ್ ಮತ್ತು ಸರಳ ಪ್ಯಾಂಟ್ ಧರಿಸಬೇಕು.

ಮಹಿಳಾ ಅಭ್ಯರ್ಥಿಗಳು(KCET Dress Code For Female 2025): ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆ ಧರಿಸುವುದು ನಿಷೇಧ. ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ವಸ್ತ್ರ ಸಂಹಿತೆಯಂತೆ ಬಟ್ಟೆ ಧರಿಸಬೇಕು.

ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಿದೆ.

ಪ್ರವೇಶ ಪತ್ರ ಕಡ್ಡಾಯ

  • ಪ್ರವೇಶ ಪತ್ರದ ಜೊತೆಯಲ್ಲಿ ಅಭ್ಯರ್ಥಿಯು ಕಡ್ಡಾಯವಾಗಿ ಮಾನ್ಯತೆ ಇರುವ ಭಾವಚಿತ್ರವುಳ್ಳ ಯಾವುದಾದರು ಒಂದು. ಕಾಲೇಜಿನ ಗುರುತಿನ ಚೀಟಿ / 12ನೇ ತರಗತಿಯ ಪ್ರವೇಶಪತ್ರ / ಬಸ್ ಪಾಸ್ / ಡ್ರೈವಿಂಗ್ ಲೈಸೆನ್ಸ್ / ಪಾಸ್ ಪೋರ್ಟ್ / ಆಧಾರ್ ಕಾರ್ಡ್ /ಪಾನ್ ಕಾರ್ಡ್ ಅನ್ನು ತೆಗೆದುಕೊಂಡು ಹೋಗಬೇಕು.

ಸೂಚನೆಗಳನ್ನು ತಪ್ಪದೇ ಪಾಲಿಸಿ:

  • ಪ್ರವೇಶ ಪತ್ರದ ಜೊತೆಯಲ್ಲಿ ನೀಡಿರುವ ಸೂಚನೆಗಳನ್ನು ತಪ್ಪದೇ ಓದಿ.
  • ಓಎಂಆರ್ ಉತ್ತರ ಪತ್ರಿಕೆಯ ಮೇಲೆ ಅಗತ್ಯ ಮಾಹಿತಿಯನ್ನು ಹೊರತು ಪಡಿಸಿ, ಬೇರೆ ಯಾವುದೇ ಮಾಹಿತಿಯನ್ನು ಬರೆಯಬಾರದು.
  • ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕನಿಷ್ಠ ಮೊದಲ ಬೆಲ್ ಆಗುವ 2 ಗಂಟೆ ಮುಂಚಿತವಾಗಿ ಹಾಜರಿರಬೇಕು.

Important Direct Links:

KCET Bell Timings 2025 PDFDownload
Official WebsiteKea.kar.nic.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment