ಕರ್ನಾಟಕ ಸಿಇಟಿ 2025 ರ ಪರೀಕ್ಷೆಯು ಏಪ್ರಿಲ್ 15, 16, 17 ರಂದು ನಡೆಯಲಿದ್ದು ಪರೀಕ್ಷೆಗಾಗಿ ಸಾವಿರಾರು ವಿದ್ಯಾರ್ಥಿಗಳು ಕರ್ನಾಟಕದಾದ್ಯಂತ ತಯಾರಿ ನಡೆಸುತ್ತಿದ್ದಾರೆ. ಪ್ರಸ್ತುತ ಪ್ರಾಧಿಕಾರವು UG CET 2025(KCET Hall Ticket 2025) ಪರೀಕ್ಷಾ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕದಾದ್ಯಂತ ಕಾಲೇಜುಗಳಲ್ಲಿ ಎಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ಪದವಿ ಪೂರ್ವ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆದು ಪ್ರವೇಶ ಪಡೆಯಲು ಅನುಕೂಲವಾಗುತ್ತದೆ. ಪರೀಕ್ಷಾ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನದ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.