ಬೆಂಗಳೂರು: ಕೃಷಿ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್-ಬಿ ಕೃಷಿ ಅಧಿಕಾರಿ(ಎಒ) ಮತ್ತು ಸಹಾಯಕ ಕೃಷಿ ಅಧಿಕಾರಿ(ಎಎಒ) ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಕಲ್ಯಾಣ ಕರ್ನಾಟಕ ವೃಂದದಲ್ಲಿ 257 + 16 ಹಿಂಬಾಕಿ ಹಾಗೂ ಮೂಲ ಉಳಿಕೆ ವೃಂದದಲ್ಲಿ 670 +2 ಹಿಂಬಾಕಿ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸಂಬಂಧಿತ ವಿಷಯದಲ್ಲಿ ಬಿಎಸ್ಸಿ, ಬಿ.ಟೆಕ್ ಅರ್ಹತೆ ಹೊಂದಿರುವವರಿಗೆ ಉತ್ತಮ ಅವಕಾಶ. ಆಸಕ್ತು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kearecruitment2026app/loginಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಸರ್ಕಾರದ ಆದೇಶದಂತೆ, ಪರಿಶಿಷ್ಟ ಜಾತಿಗೆ ಶೇ.15 ರಷ್ಟು ಮೀಸಲಾತಿ ಅಳವಡಿಸಿಕೊಂಡು ಹೊಸ ಅಧಿಸೂಚನೆ ಹೊರಡಿಸಲು ಕೃಷಿ ಇಲಾಖೆಯ ಆಯುಕ್ತರು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಈ ಹಿಂದೆ ಆದೇಶ ಹೊರಡಿಸಿದ್ದರು. ಅದರಂತೆ ಮೀಸಲಾತಿ ಅನುಷ್ಠಾನಗೊಳಿಸಿ ಮರು ಅರ್ಜಿ ಆಹ್ವಾನಿಸಲು ಪ್ರಸ್ತಾವನೆ ಸಲ್ಲಿಕೆಯಾದ ಬೆನ್ನಲ್ಲೇ ಮರು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೆಇಎ ತಿಳಿಸಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ ದಿನಾಂಕ – ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ – ಜೂನ್ 20 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜೂನ್ 22 ಪರೀಕ್ಷೆಯ ದಿನಾಂಕ – ಕೆಕೆ; ಜುಲೈ 25, ಆರ್ಪಿಸಿ; ಜುಲೈ 26, 2026
ಶೈಕ್ಷಣಿಕ ಅರ್ಹತೆ:
ಶೇ.85 ರಷ್ಟು ಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ; ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಸ್ಸಿ (ಕೃಷಿ) ಅಥವಾ ಬಿಸ್ಸಿ (ಆನರ್ಸ್) ಕೃಷಿ ಪದವಿ ಪಡೆದಿರಬೇಕು.
ಶೇ.15 ರಷ್ಟು ಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ; ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಟೆಕ್(ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಿ.ಟೆಕ್(ಆಹಾರ ತಂತ್ರಜ್ಞಾನ) ಅಥವಾ ಬಿಎಸ್ಸಿ(ಕೃಷಿ ಮಾರುಕಟ್ಟೆ ಮತ್ತು ಸಹಕಾರ) ಅಥವಾ ಬಿಎಸ್ಸಿ(ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ ಅಥವಾ ಬಿಎಸ್ಸಿ (ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ ಬಿಎಸ್ಸಿ(ಕೃಷಿ ಜೈವಿಕ ತಂತ್ರಜ್ಞಾನ) ಅಥವಾ ಬಿ.ಟೆಕ್(ಜೈವಿಕ ತಂತ್ರಜ್ಞಾನ) ಅಥವಾ ಬಿಎಸ್ಸಿ(ಅಗ್ರಿಕಲ್ಬರಲ್ ಇಂಜಿನಿಯರಿಂಗ್) ಅಥವಾ ಬಿ.ಟೆಕ್(ಅಗ್ರಿಕಲ್ಬರಲ್ ಇಂಜಿನಿಯರಿಂಗ್) ಪದವಿ ಹೊಂದಿರಬೇಕು.
ವಯೋಮಿತಿ:
20-06-2026ರಂತೆ;
ಕನಿಷ್ಠ 18 ವರ್ಷಗಳು
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 40 ವರ್ಷಗಳು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು ಹರಿಶಿನ ಜಾತಿ / ಪರಿಶಿಷ್ಟ ಪಂಗಡ / ಪವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳು
ಸೂಚನೆ: ಸರ್ಕಾರಿ ನಿಯಮಾನುಸಾರ ವರ್ಗವಾರು ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಪರೀಕ್ಷೆ ದಾಖಲಾತಿ ಪರಿಶೀಲನೆ
ಸಂಬಳ:
ಕೃಷಿ ಅಧಿಕಾರಿ ಹುದ್ದೆಗೆ ವೇತನ ಶ್ರೇಣಿ:- 69250-1650-74200-1900-85600-2300-99400-2700-115600-3100-134200/- ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ವೇತನ ಶ್ರೇಣಿ:-65950-1650-74200-1900-85600-2300-99400-2700-115600-3100-124900/-
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ-2ಎ/2ಬಿ/3ಎ/3ಬಿ ವರ್ಗದವರಿಗೆ ₹750/- ಪ.ಜಾತಿ/ಪ.ಪಂಗಡ/ಪ್ರವರ್ಗ-1/ಮಾಜಿ ಸೈನಿಕ/ತೃತೀಯ ಲಿಂಗದ ಅಭ್ಯರ್ಥಿಗಳಿಗೆ ₹500/- ವಿಕಲಚೇತನ ಅಭ್ಯರ್ಥಿಗಳಿಗೆ ₹250/-
ಅರ್ಜಿ ಸಲ್ಲಿಕೆ ಹೇಗೆ.?
ಮೊದಲು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/indexnew.aspxಗೆ ಭೇಟಿ ನೀಡಿ. ನಂತರ “ನೇಮಕಾತಿ” ವಿಭಾಗದಡಿ “AGRICULTURE DEPARTMENT (AO & AAO) ನೇಮಕಾತಿ -2026” ಉಪವಿಭಾಗದಡಿ ನೀಡಲಾದ “RPC ಅಥವಾ KK ವೃಂದ” ಆಯ್ಕೆ ಮಾಡಿಕೊಳ್ಳಿ, ನಂತರ ಆಯಾ ವಿಭಾಗದಲ್ಲಿ ಒದಗಿಸಲಾದ “ಕೃಷಿ ಇಲಾಖೆ (AO ಮತ್ತು AAO)ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ -30-05-2026” ಲಿಂಕ್ ಮೇಲೆ ಒತ್ತುವ ಮೂಲಕ ಅರ್ಜಿ ಸಲ್ಲಿಸಬಹುದು.