BCWD, SWD ಉಚಿತ ತರಬೇತಿ ಪ್ರವೇಶ ಪರೀಕ್ಷೆ-2025 ಕೀ ಉತ್ತರ ಬಿಡುಗಡೆ

Published on:

Updated On:

ಫಾಲೋ ಮಾಡಿ
KEA BCWD/SWD Free Coaching Exam Key Answer 2025
KEA BCWD SWD Free Coaching Exam Key Answer 2025

ಕೆಇಎಯು ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ವಿವಿಧ ಸರ್ಕಾರಿ ಪರೀಕ್ಷೆಗಳ ಪೂರ್ವಭಾವಿ ಪರೀಕ್ಷೆಗೆ ತರಬೇತಿ ನೀಡುವ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರ ಬಿಡುಗಡೆ ಮಾಡಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜು.19ರಂದು ವಿವಿಧ ಪರಿಕ್ಷಾ ಕೇಂದ್ರಗಳಲ್ಲಿ ನಡೆಸಲಾದ
ಉಚಿತ ತರಬೇತಿ ಪ್ರವೇಶ ಪರೀಕ್ಷೆಯ ಕೀ ಉತ್ತರವನ್ನು https://cetonline.karnataka.gov.in/kea/ನಲ್ಲಿ ಬಿಡುಗಡೆ ಮಾಡಲಾಗಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೀ ಉತ್ತರಗಳನ್ನು ಪರಿಶೀಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್​.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “BCWD, SWD ಉಚಿತ ತರಬೇತಿ ಪ್ರವೇಶ ಪರೀಕ್ಷೆ-2025 ಕೀ ಉತ್ತರ ಬಿಡುಗಡೆ”

Leave a Comment