ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ಆಯ್ಕೆಗಾಗಿ ಅರ್ಜಿ

ಅರ್ಜಿ ಸಲ್ಲಿಸಲು ನ.10 ಕೊನೆಯ ದಿನ

ಫಾಲೋ ಮಾಡಿ
KEA BDA Job Notification 2025
KEA BDA Job Notification 2025

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(Bangalore Development Authority)ದಲ್ಲಿ ಪ್ರಥಮ ದರ್ಜೆ ಸಹಾಯಕ(ಪ್ರಥಮ ದರ್ಜೆ ಕೋರ್ಟ್‌ ಕ್ಲರ್ಕ್‌/ರೆವಿನ್ಯೂ ಇನ್ಸ್ ಪೆಕ್ಟರ್) ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ.

ಉಳಿಕೆ ವೃಂದದಲ್ಲಿ 18 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 07 ಸೇರಿ ಒಟ್ಟು 25 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಬೆಂಗಳೂನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನ.10ಕ್ಕೂ ಮೊದಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/indexnew ನ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment