ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ಆಯ್ಕೆಗಾಗಿ ಅರ್ಜಿ

ಅರ್ಜಿ ಸಲ್ಲಿಸಲು ನ.10 ಕೊನೆಯ ದಿನ

Published on:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(Bangalore Development Authority)ದಲ್ಲಿ ಪ್ರಥಮ ದರ್ಜೆ ಸಹಾಯಕ(ಪ್ರಥಮ ದರ್ಜೆ ಕೋರ್ಟ್‌ ಕ್ಲರ್ಕ್‌/ರೆವಿನ್ಯೂ ಇನ್ಸ್ ಪೆಕ್ಟರ್) ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ.

ಉಳಿಕೆ ವೃಂದದಲ್ಲಿ 18 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 07 ಸೇರಿ ಒಟ್ಟು 25 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಬೆಂಗಳೂನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನ.10ಕ್ಕೂ ಮೊದಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/indexnew ನ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 09, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 10, 2025 (NKK- ಅ.31)
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ನವೆಂಬರ್ 11, 2025 (NKK- ನ.01)

ಲಭ್ಯವಿರುವ ಹುದ್ದೆಗಳು:

  • ಪ್ರಥಮ ದರ್ಜೆ ಸಹಾಯಕ (ಪ್ರಥಮ ದರ್ಜೆ ನ್ಯಾಯಾಲಯ ಗುಮಾಸ್ತ/ಕಂದಾಯ ನಿರೀಕ್ಷಕ)- 04 ಹುದ್ದೆಗಳು (KK-01 ಹುದ್ದೆ)
  • ದ್ವಿತೀಯ ದರ್ಜೆ ಸಹಾಯಕ – 14 ಹುದ್ದೆಗಳು (KK-06 ಹುದ್ದೆಗಳು)

ಶೈಕ್ಷಣಿಕ ಅರ್ಹತೆ:

ಬಿಡಿಎ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕ ಹುದ್ದೆಗೆ – ಪದವಿ
ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ – ಪಿಯುಸಿ

ವಯಸ್ಸಿನ ಮಿತಿ:

ಅರ್ಜಿ ಸ್ವೀಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರಬೇಕು.

ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – 38 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 41 ವರ್ಷಗಳು ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ – 43 ವರ್ಷಗಳ ಒಳಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ:

ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ, ಅಧಿಸೂಚನೆಯಂತೆ ಮಾಸಿಕ ರೂ.34,100/- ರಿಂದ ರೂ.83,700/- ವರೆಗೆ ವೇತನ ಉದ್ದೇಶಿಸಲಾಗಿದೆ.

ಪ್ರಥಮ ದರ್ಜೆ ಸಹಾಯಕ ಹುದ್ದೆಗೆ – ಮಾಸಿಕ ರೂ.44,425/- ದಿಂದ 83,700/-
ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ – ಮಾಸಿಕ ರೂ.34,100/- ದಿಂದ 67,600/-

ಆಯ್ಕೆ ವಿಧಾನ:

  • ಲಿಖಿತ ಪರೀಕ್ಷೆ
  • ದಾಖಲೆ ಪರಿಶೀಲನೆ

ಅರ್ಜಿ ಶುಲ್ಕ:

  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ.750/-
  • ಪ.ಜಾತಿ/ಪ.ಪಂಗಡ, ಮಾಜಿ ಸೇನಿಕ ಅಭ್ಯರ್ಥಿಗಳಿಗೆ- 500/-
  • ವಿಕಲಚೇತನ ಅಭ್ಯರ್ಥಿಗಳಿಗೆ – 250/-

How to apply for KEA BDA Recruitment 2025?

  • ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣ https://cetonline.karnataka.gov.in/VAOResult/DigilockerReg.aspx ಕ್ಕೆ ಭೇಟಿ ನೀಡಿ. ನಿಮ್ಮ ಇ-ಮೇಲ್ ಮತ್ತು ದೂರವಾಣಿ ಸಂಖ್ಯೆಯನ್ನು ನೀಡಿ ರೆಜಿಸ್ಟರ್ ಆಗಿರಿ.
Kea 708 Various Posts Online Form 2025-26
Kea 708 Various Posts Online Form 2025-26
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ವಯಕ್ತಿಕ, ಶೈಕ್ಷಣಿಕ ಹಾಗೂ ಉದ್ಯೋಗ ಅನುಭವವಿದ್ದರೆ ಅವುಗಳ ವಿವರಗಳನ್ನು ಪೂರೈಸಿ.
  • ಅರ್ಜಿಯಲ್ಲಿ ಕೇಳಿರುವ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ನಿಮ್ಮ ಇತ್ತೀಚಿನ ಛಾಯಾಚಿತ್ರ ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ನೀವು ನೀಡಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಂಡು ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.
  • ನಂತರ ಅರ್ಜಿಯನ್ನು Submit ಮಾಡಿ ಹಾಗೂ ಮುಖ್ಯವಾಗಿ ಅರ್ಜಿ ಸಂಖ್ಯೆಯನ್ನು ತೆಗೆದಿಟ್ಟುಕೊಳ್ಳಿ.

Important Direct Links:

BDA Official Notification NKK PDFDownload
BDA Official Notification KK PDFDownload
Online Application Form LinkApply Now
Official Websitehttps://kbda.karnataka.gov.in
More UpdatesKarnatakaHelp.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

2 thoughts on “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ಆಯ್ಕೆಗಾಗಿ ಅರ್ಜಿ”

Leave a Comment