ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(KEA) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಮಿಕ್ಕಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆಗಳು, ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಸೆಪ್ಟೆಂಬರ್ 1 ರಂದು ಕರ್ನಾಟಕದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಕರ್ನಾಟಕ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ cetonline.karnataka.gov.in ನಲ್ಲಿ ತಮ್ಮ ಜನ್ಮ ದಿನಾಂಕ ಮತ್ತು ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಲೇಖನದಲ್ಲಿ KEA BMTC Hall Ticket 2024 ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
How to Download KEA BMTC Hall Ticket 2024
ಪ್ರವೇಶ ಪತ್ರವನ್ನು ಆನ್ ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ…?
ಮೊದಲಿಗೆ ಅಧಿಕೃತ ವೆಬ್ ಸೈಟಿಗೆ https://cetonline.karnataka.gov.in/examcenter_2024/forms/hallticket.aspx ಭೇಟಿ ನೀಡಿ.
ನಂತರ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ನಂತರ ಸಲ್ಲಿಸು ಕ್ಲಿಕ್ ಮಾಡಿ, ಪ್ರವೇಶ ಪತ್ರವು ನಿಮ್ಮ ಮೊಬೈಲ್ ಫೋನಿನ ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ