KEA KUWSDB Exam Hall Ticket 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಈ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಸದರಿ ಈ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಲೆಕ್ಕ ಸಹಾಯಕರು, ಸಹಾಯಕ ಲೆಕ್ಕಿಗ, ನಿರ್ವಾಹಕರು, ಸಹಾಯಕ ಸಂಚಾರ ನಿರ್ವಾಹಕರು, ಕೆಎಸ್ ಟಿ ಕಾನ್ಸ್ಟೇಬಲ್, ತಾಂತ್ರಿಕ ಸಹಾಯಕರು ಮತ್ತು ಅರ್ಟಿಸಿಯನ್ ಹುದ್ದೆಗಳಿಗೆ ಈ ಪರೀಕ್ಷೆಯು ನಡೆಯುತ್ತಿದೆ.
ರಾಜ್ಯದ್ಯಂತ ಈ ಖಾಲಿ ಹುದ್ದೆಗಳಿಗೆ ಸಾಕಷ್ಟು ಅಭ್ಯರ್ಥಿಗಳು ಈಗಾಗಲೇ ಅರ್ಜಿ ಸಲ್ಲಿಸಿದ್ದು, ಆಗಸ್ಟ್ 11 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಆನ್ ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು KEA ಅಧಿಕೃತ ವೆಬ್ ಸೈಟ್‌ನ ಮೂಲಕ ಡೌನ್ಲೋಡ್ ಮಾಡಿಕೊಂಡು ತಮ್ಮ ಪರೀಕ್ಷಾ ಕೇಂದ್ರಗಳು ಮತ್ತು ಪರೀಕ್ಷಾ ಸಮಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.
ಆಗಸ್ಟ್ 11, 2024 ರಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸ್ಪರ್ಧಾತ್ಮಕ ಪರೀಕ್ಷೆಗಳು ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ ಪತ್ರಿಕೆ- 01 ಪರೀಕ್ಷೆ , ನಂತರ ಮಧ್ಯಾಹ್ನ 2:30 ರಿಂದ 4.30 ರವರೆಗೆ ಪತ್ರಿಕೆ-2 ನಡೆಯಲಿದೆ. ಹಾಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಈ ಲೇಖನದಲ್ಲಿ ನಾವು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
How to Download KEA BMTC(KK)/KKRTC/KUWSDB Exam Hall Ticket 2024
ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ;