KEA Exam Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಜುಲೈ 13 ರಿಂದ ಜುಲೈ 14ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯ ಪತ್ರಿಕೆ -1 ಮತ್ತು ಪತ್ರಿಕೆ- 2ರ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಜುಲೈ 16 ರಂದು ಪ್ರಕಟಿಸಗಿತ್ತು. ಇಂದು ಪರಿಷ್ಕೃತ ಕೀ ಉತ್ತರವನ್ನು ಇಲಾಖೆಯು ಬಿಡುಗಡೆ ಮಾಡಿದೆ
ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿದ ಹುದ್ದೆಗಳ ನೇಮಕಾತಿಗೆ ಸಂಬಂಧ ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಸಂಬಂಧಿಸಿದ ಎಲ್ಲ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಾಧಿಕಾರವು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿಸಿರುವ ಕೀ ಉತ್ತರಗಳಲ್ಲಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನ ಮೂಲಕ ಜುಲೈ 18 ಸಂಜೆ 5:30ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆಗಳ ವಿವರಗಳೊಂದಿಗೆ “Justification” ಅನ್ನು PDF ರೂಪದಲ್ಲಿ ಸಲ್ಲಿಸಬೇಕು. ವಿಷಯ ತಜ್ಞರ ಸಮಿತಿಯು ಸಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಈ ಲೇಖನದಲ್ಲಿ ನಾವು ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡುವುದು ಹೇಗೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ತಿಳಿದುಕೊಳ್ಳೋಣ.
ಪ್ರಮುಖ ದಿನಾಂಕಗಳು:
ಕೀ ಉತ್ತರಗಳ ಮೇಲಿನ ಆಕ್ಷೇಪಣೆಗಳನ್ನು ಸಲ್ಲಿಸಲು ಪ್ರಾರಂಭದ ದಿನಾಂಕ – 16-07-2024
ಕೀ ಉತ್ತರಗಳ ಮೇಲಿನ ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ – 18-07-2024