ಬೆಂಗಳೂರಿನ ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆ ವತಿಯಿಂದ 2026ನೇ ಸಾಲಿಗೆ ಫಾರ್ಮಸಿಸ್ಟ್ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಜ.27 ಕೊನೆಯ ದಿನವಾಗಿದೆ. ಡಿಪ್ಲೊಮಾ ಇನ್ ಫಾರ್ಮಸಿ ಕೋರ್ಸ್ ಮುಗಿಸಿ ಹೊರಬರುವ ವಿದ್ಯಾರ್ಥಿಗಳು ಸ್ಥಿರ ಮತ್ತು ಸೂಕ್ತ ಉದ್ಯೋಗವನ್ನು ಪಡೆದುಕೊಳ್ಳಲು ಸಹಕಾರಿಯಾಗುವಂತೆ ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿಯಿರುವ ಹುದ್ದೆಗಳ ಎದುರಾಗಿ 950 ಡಿಪ್ಲೊಮಾ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, 11 ತಿಂಗಳ ಅವಧಿವರೆಗೆ ತರಬೇತಿ ನೀಡಲಿದೆ. ರಾಜ್ಯದ ವಿದ್ಯಾರ್ಥಿಗಳು ಮಾತ್ರ ತರಬೇತಿಗೆ ಅರ್ಹರು. ಆಸಕ್ತರು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kea/ನ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಡಿಪ್ಲೊಮಾ ಕಾಲೇಜುಗಳಿಂದ ಕಳೆದ ಎರಡು (2022-23 ಮತ್ತು 2023-24) ವರ್ಷಗಳಲ್ಲಿ ಡಿ. ಫಾರ್ಮ (ಫಾರ್ಮಸಿಯಲ್ಲಿ ಡಿಪ್ಲೊಮಾ) ಕೋರ್ಸ್ ಪೂರ್ಣಗೊಳಿಸಿರಬೇಕು ಜೊತೆಗೆ ಸರ್ಕಾರಿ ಕೋಟಾದಡಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ:
ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆ ನಿಯಮಗಳ ಅನುಸಾರ.
ತರಬೇತಿಯ ಅವಧಿ:
ಸದರಿ ಫಾರ್ಮಸಿಸ್ಟ್ ಅಪ್ರೆಂಟಿಸ್ಶಿಪ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು 11 ತಿಂಗಳ ಅವಧಿಯವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHCs) ತರಬೇತಿಗೆ ನಿಯೋಜನೆ ಮಾಡಲಾಗುತ್ತದೆ.
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ 8,000ರೂ. ಮಾಹೆಯಾನ ಸ್ಟೈಫಂಡ್ ಅನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳ ಮೆರಿಟ್ ಲಿಸ್ಟ್
ಕೌನ್ಸಲಿಂಗ್
ಅಂತಿಮ ಆಯ್ಕೆ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೂ – 600ರೂ.
ಅರ್ಜಿ ಸಲ್ಲಿಸುವ ವಿಧಾನ
• ಮೊದಲಿಗೆ ಅಭ್ಯರ್ಥಿಗಳು KEA ಅಧಿಕೃತ ಜಾಲತಾಣ http://kea.kar.nic.in/(https://cetonline.karnataka.gov.in/kea/)ಕ್ಕೆ ಭೇಟಿ ನೀಡಿ.
• “ಫಾರ್ಮಸಿಸ್ಟ್ ಅಪ್ರೆಂಟಿಸ್ಶಿಪ್ ತರಬೇತಿ 2026” ಲಿಂಕ್ ಮೇಲೆ ಕ್ಲಿಕ್ ಮಾಡಿ
• ನಂತರ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.