ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ಭರ್ತಿಗೆ ಕೆಇಎ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಡಿ.15 ಕೊನೆದಿನ

Published on:

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಡಿ ಖಾಲಿ ಇರುವ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಒಟ್ಟು 35 ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ- ನವೆಂಬರ್‌ 18
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 15
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ- ಡಿಸೆಂಬರ್ 16
  • ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ- ಫೆಬ್ರವರಿ 2027

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ (B.E) ಅಥವಾ ಬಿ.ಟೆಕ್ (B.Tech), ವಿಜ್ಞಾನ ಪದವಿ (Bachelor degree in Science), ವಾಣಿಜ್ಯ ಪದವಿ (Bachelor degree in Commerce), ಅಥವಾ ಬಿ.ಬಿ.ಎ/ಬಿ.ಬಿ.ಎಂ (BBA/BBM) ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು.

ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:

  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 40 ವರ್ಷ
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 43 ವರ್ಷ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷ

ಆಯ್ಕೆ ಪ್ರಕ್ರಿಯೆ:

  • ಸ್ಪರ್ಧಾತ್ಮಕ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ₹54,175 ರಿಂದ ₹99,400ರವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅರ್ಹತೆ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ ₹750
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ, ತೃತೀಯ ಲಿಂಗಿ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ₹500
  • ಇತರೆ ವಿಶೇಷ ವರ್ಗದವರಿಗೆ ₹250

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/indexnewನ “ನೇಮಕಾತಿ” ವಿಭಾಗ “ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (RPC) – 2026” ಉಪವಿಭಾಗದಡಿ ಲಭ್ಯವಿರುವ “ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನೇಮಕಾತಿ-2026 ಆನ್‌ಲೈನ್ ಅರ್ಜಿ ಲಿಂಕ್. 18-11-2026” ಆನ್‌ಲೈನ್‌ ನಮೂನೆ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಮುಖ್ಯ ಲಿಂಕ್‌ಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್‌ ಲಿಂಕ್ಡೌನ್ಲೋಡ್‌ ಮಾಡಿ
ಆನ್‌ಲೈನ್‌ ಅರ್ಜಿ ನಮೂನೆ ಲಿಂಕ್‌ಈಗಲೇ ಅರ್ಜಿ ಸಲ್ಲಿಸಿ
ಅಧಿಕೃತ ಜಾಲತಾಣkea.kar.nic.in
ಮತ್ತಷ್ಟು ಸುದ್ದಿಗಳಿಗಾಗಿಕರ್ನಾಟಕ ಹೆಲ್ಪ್.‌ಇನ್
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment