ಡಿಪ್ಲೊಮಾ ಸಿಇಟಿ-2026ರ ನೋಂದಣಿಗಾಗಿ ಅರ್ಜಿ ಆಹ್ವಾನ

Published on:

ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ/3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗಾಗಿ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ(ಡಿಸಿಇಟಿ)-2026ರ ನೋಂದಣಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ನೋಂದಣಿಗಾಗಿ ಮಾ.17 ರಿಂದ ಏ.03ರವೆರೆಗೆ ಅವಕಾಶವಿದೆ. ಅಭ್ಯರ್ಥಿಗಳು ಡಿಪ್ಲೊಮಾ ಸಿಇಟಿಗೆ ನೋಂದಣಿಗಾಗಿ ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ – ಮಾರ್ಚ್ 17, 2026
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ – ಏಪ್ರಿಲ್ 03, 2026
  • ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ – ಏಪ್ರಿಲ್ 04, 2026
  • ಡಿಸಿಇಟಿ-2026 ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಾಧಿಕಾರದ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡುವ ದಿನಾಂಕ – ಮೇ 07, 2026
  • ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷಾದಿನಾಂಕ – ಮೇ 23, 2026
  • ವಿವರಣಾತ್ಮಕ ಕನ್ನಡ ಭಾಷಾ ಪರೀಕ್ಷಾದಿನಾಂಕ – ಮೇ 23, 2026

ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳು:

✓ ಬಿ.ಇ ಕೋರ್ಸ್‌ಗಳಿಗೆ; ಡಿಸಿಇಟಿ ಮೂಲಕ ಬಿಇ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅಭ್ಯರ್ಥಿಗಳು ಯಾವುದೇ ಡಿಪ್ಲೊಮಾ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

• ಡಿಪ್ಲೊಮಾ ಕೋರ್ಸ್‌ನ ಅಂತಿಮ ವರ್ಷದಲ್ಲಿ ಎಲ್ಲಾ ವಿಷಯಗಳಲ್ಲಿ ಒಟ್ಟಾರೆಯಾಗಿ ಕನಿಷ್ಠ 45% ಅಂಕಗಳನ್ನು ಹಾಗೂ ಎಸ್.ಸಿ, ಎಸ್,ಟಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಕನಿಷ್ಠ 40% ಅಂಕಗಳನ್ನು ಪಡೆದಿದ್ದರೆ ಅರ್ಜಿ ಸಲ್ಲಿಸಲು ಅರ್ಹರು.

✓ ಬಿ.ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ; ಡಿಸಿಇಟಿ ಮೂಲಕ ಬಿ.ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅಭ್ಯರ್ಥಿಗಳು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ವಿಷಯಗಳೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ 50% ಪ್ರತಿಶತ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಗಣಿತವನ್ನು ಕಡ್ಡಾಯ ವಿಷಯವಾಗಿಟ್ಟುಕೊಂಡು ಕನಿಷ್ಠ 50% ಪ್ರತಿಶತ ಅಂಕಗಳೊಂದಿಗೆ 10ನೇ + 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿವರವಾದ ಶೈಕ್ಷಣಿಕ ಅರ್ಹತೆಯನ್ನು ಪರಿಶೀಲಿಸಲು ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಪ್ಪದೇ ಕೆಇಎ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ *ಡಿಸಿಇಟಿ – 2026 ಅರ್ಜಿ ಸಲ್ಲಿಸಲು ಮಾಹಿತಿ ಬುಲೆಟಿನ್* ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.

ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ 2026ರ ವೇಳಾಪಟ್ಟಿ:

ಎಲ್ಲಾ ಎಂಜಿನಿಯರಿಂಗ್ ಡಿಪ್ಲೊಮಾ ಕಾರ್ಯಕ್ರಮಗಳಿಗೆ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ 2026 ಅನ್ನು ದಿನಾಂಕ 23-05-2026 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಒಟ್ಟು 100 ಅಂಕಗಳಿಗೆ ನಡೆಸಲಾಗುತ್ತದೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ವಿವರಣಾತ್ಮಕ ಕನ್ನಡ ಭಾಷಾ ಪರೀಕ್ಷೆ ಅನ್ನು (ಪರೀಕ್ಷಾ ಕೇಂದ್ರ ಬೆಂಗಳೂರಿನಲ್ಲಿ ಮಾತ್ರ) ದಿನಾಂಕ 23-05-2026 ರಂದು ಬೆಳಿಗ್ಗೆ 10.30 ರಿಂದ 11.30ರವರೆಗೆ ಒಟ್ಟು 50 ಅಂಕಗಳಿಗೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ

• ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್https://cetonline.karnataka.gov.in/kea/ ಗೆ ಭೇಟಿ ನೀಡಿ.

• ಬಳಿಕ ಇತ್ತೀಚಿನ ಪ್ರಕಟಣೆಗಳು ಶೀರ್ಷಿಕೆಯ ಕೆಳಗೆ ನೀಡಲಾಗಿರುವ *17-03 DCET – 2026 ಆನ್‌ಲೈನ್ ಅರ್ಜಿ ಲಿಂಕ್. 17/03/2026* ಲಿಂಕ್ ಮೇಲೆ ಟ್ಯಾಪ್ ಮಾಡಿ.

• ಇದಾದ ಬಳಿಕ ಬಳಕೆದಾರರ ಹೆಸರು ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ ಹಾಗೂ ಶಾಲಾ ವ್ಯಾಸಂಗ, ಕನ್ನಡ ಮಾಧ್ಯಮ, ಜಾತಿ/ಪ್ರವರ್ಗ, ವಾರ್ಷಿಕ ಆದಾಯ, ಇತ್ಯಾದಿ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ನಮೂನೆಯ ಪ್ರಿಂಟ್ ತೆಗೆದುಕೊಳ್ಳಿ.

• ಅರ್ಜಿ ಸಲ್ಲಿಸಲು ಅಪ್ಲೋಡ್ ಮಾಡಲಾದ ಯಥಾವತ್ ಭಾವಚಿತ್ರ ಹಾಗೂ ಅರ್ಜಿ ಶುಲ್ಕದ ರಸೀದಿಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಉಳಿಸಿಕೊಳ್ಳಿ.

Important Direct Links:

DCET 2026 Notice PDFDownload
DCET 2026 Information Bulletin PDFDownload
DCET 2026 Online Registration LinkRegister Now
Official Websitekea.kar.nic.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment