ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಫ್‌ಡಿಎ 02 ಸ್ಥಾನಗಳು, ಎಸ್‌ಡಿಎ 04 ಸ್ಥಾನಗಳಿಗೆ ನೇಮಕ ನಡೆಯಲಿದೆ. ದ್ವಿತೀಯ ಪಿಯುಸಿ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/kearpcrec2026ಕ್ಕೆ ಭೇಟಿ ನೀಡಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಮೇ 20
- ಅರ್ಜಿ ಸಲ್ಲಿಸಲು ಕೊನೆ ದಿನ – ಜೂನ್ 03
- ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ – ಜೂನ್ 04
ಶೈಕ್ಷಣಿಕ ಅರ್ಹತೆ:
ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಹುದ್ದೆಗೆ:- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) ಹುದ್ದೆಗೆ:- ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ವಯೋಮಿತಿ:
03-06-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ;
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 40 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು
ಪ.ಜಾತಿ/ಪ.ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳು
ಆಯ್ಕೆ ಪ್ರಕ್ರಿಯೆ:
- ಸ್ಪರ್ಧಾತ್ಮಕ ಪರೀಕ್ಷೆ
- ದಾಖಲಾತಿ ಪರಿಶೀಲನೆ
ಸಂಬಳ:
ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಹುದ್ದೆಗೆ ₹44425 ರಿಂದ ₹83700/-
ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) ₹34100 ರಿಂದ ₹67700/-
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ-2ಎ/2ಬಿ/3ಎ/3ಬಿ ವರ್ಗದವರಿಗೆ ₹750/-
ಪ.ಜಾತಿ/ಪ.ಪಂಗಡ/ಪ್ರವರ್ಗ-1/ಮಾಜಿ ಸೈನಿಕ/ತೃತೀಯ ಲಿಂಗದ ಅಭ್ಯರ್ಥಿಗಳಿಗೆ ₹500/-
ವಿಕಲಚೇತನ ಅಭ್ಯರ್ಥಿಗಳಿಗೆ ₹250/
ಅರ್ಜಿ ಸಲ್ಲಿಕೆ ಹೇಗೆ.?
ಓದುಗ ಬಂಧುಗಳೇ, ಕೆಇಎ ಅಧಿಕೃತ ಜಾಲತಾಣದಲ್ಲಿ ನೇಮಕಾತಿ ವಿಭಾಗದಡಿ ನೀಡಲಾದ “ಕೆಇಎ ನೇಮಕಾತಿ (RPC) – 2026” ಉಪವಿಭಾಗದಡಿ (https://cetonline.karnataka.gov.in/kea/kearpcrec2026) ಒದಗಿಸಲಾದ ಆನ್‌ಲೈನ್ ಅರ್ಜಿ ನಮೂನೆ ಮುಖೇನ ಅರ್ಜಿ ಸಲ್ಲಿಕೆ ಮಾಡಬಹುದು.
Important Direct Links:
| Official Notification PDF | Download |
| Online Application Form Link | Apply Now |
| Official Website | kea.kar.nic.in |
| More Updates | KarnatakaHelp.in |
D k koppalu village K r nagar taloku Mysore ditsic hebblu hobali shiddapur pots
D k koppalu village K r nagar taloku Mysore ditsic hebblu hobali shiddapur postu
D ಕೊಪ್ಪಳ ತಾಲೂಕು ಕುಷ್ಟಗಿ.
I am Abhishek i have completed my degree B c a i am looking for job….. Thank you one all