Free Coaching Exam Dress Code: ನಾಳೆ ನಡೆಯಲಿರುವ ಉಚಿತ ಕೋಚಿಂಗ್ ಪರೀಕ್ಷೆಯಲ್ಲಿ ವಸ್ತ್ರ ಸಂಹಿತೆ ಹೀಗಿರಬೇಕು!

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

Updated On:

ಫಾಲೋ ಮಾಡಿ

KEA Free IAS KAS Exam Dress Code 2025
KEA Free Coaching Exam Dress Code 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಉಚಿತ ಕೋಚಿಂಗ್ ಸ್ಪರ್ಧಾತ್ಮಕ ಪರೀಕ್ಷೆ(KEA Free IAS KAS Exam Dress Code 2025)ಗೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಗಳಿಗೆ ನಿಗದಿತ ವಸ್ತ್ರಸಂಹಿತೆ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಈ ಸಂಬಂಧ ಪ್ರಾಧಿಕಾರವು ಶನಿವಾರ(ಮೇ 31) ನಡೆಯಲಿರುವ ಪರೀಕ್ಷೆಯ ವಸ್ತ್ರಸಂಹಿತೆ ಕುರಿತು ಮಾಹಿತಿ ಬಿಡುಗಡೆ ಮಾಡಿದೆ.

ಪರೀಕ್ಷೆಯನ್ನು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸುವ ಸಲುವಾಗಿ ಪ್ರಾಧಿಕಾರವು ಪರೀಕ್ಷಾ ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಅನ್ನು ಜಾರಿ ಮಾಡಿ, ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು, ಈ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಪರೀಕ್ಷೆಯ ವೇಳಾಪಟ್ಟಿ

ಯುಪಿಎಸ್ಸಿ, ಕೆಎಎಸ್ ವಿಷಯಗಳಿಗೆ ದಿನಾಂಕ 31-05-2025 ರಂದು ಮಧ್ಯಾಹ್ನ 02.30 ರಿಂದ 04.30 ರ ವರೆಗೆ ಒಟ್ಟು 100 ಅಂಕಗಳಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಪರೀಕ್ಷಾ ದಿನದ ಮುಖ್ಯ ಸೂಚನೆಗಳು:

  • ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು.
  • ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ.
  • ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ. ಪರೀಕ್ಷಾ ಕೊಠಡಿಯಲ್ಲಿ ನಿಷೇಧಿಸಲಾದ ವಸ್ತುಗಳು
  • ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
  • ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ.
  • ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ.
  • ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.
  • ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
  • ತಲೆಯ ಮೇಲೆ ಟೋಪಿ/ HAT ಧರಿಸುವಂತಿಲ್ಲ.
  • ಯಾವುದೇ ರೀತಿಯ ಮುಖ ಮುಚ್ಚುವಂತ ಮಾಸ್ಕನ್ನು ಧರಿಸುವಂತಿಲ್ಲ.

ಪುರುಷ ಅಭ್ಯರ್ಥಿಗಳ ಡ್ರೆಸ್ ಕೋಡ್:

  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ ಧರಿಸುವಂತಿಲ್ಲ. ಅರ್ಧ ತೋಳಿನ ಶರ್ಟ್‌ ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್‌ರಹಿತ ಸಾಧಾರಣ ಶರ್ಟ್/ ಟಿ-ಶರ್ಟ್ ಧರಿಸಲು ಆದ್ಯತೆ ನೀಡುವುದು.
  • ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
  • ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ (ZIP) ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.
  • ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬೇಕು.
  • ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ಡ್ರೆಸ್ ಕೋಡ್:

  • ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಜ್‌ ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ಮೇಲೆ ಉಲ್ಲೇಖಿಸಿರುವ ಬಗೆಯಲ್ಲಿ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
  • ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  • ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ವಿಶೇಷ ಸೂಚನೆ:

ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ಕೆಇಎ ತಿಳಿಸಿದೆ.

Important Direct Links:

Free Coaching Exam Dress Code 2025 PDFDownload
Free Coaching Exam 2025 Bell Timings PDFDownload
Official WebsiteKea.Kar.Nic.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment