Free Coaching Exam Dress Code 2025: ಉಚಿತ ಕೋಚಿಂಗ್ ಪರೀಕ್ಷೆಯಲ್ಲಿ ವಸ್ತ್ರ ಸಂಹಿತೆ ಹೀಗಿರಬೇಕು!

Published on:

Updated On:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಉಚಿತ ಕೋಚಿಂಗ್ ಸ್ಪರ್ಧಾತ್ಮಕ ಪರೀಕ್ಷೆ(KEA Free IAS KAS Exam Dress Code 2025)ಗೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಗಳಿಗೆ ನಿಗದಿತ ವಸ್ತ್ರಸಂಹಿತೆ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಈ ಸಂಬಂಧ ಪ್ರಾಧಿಕಾರವು ಉಚಿತ ಕೋಚಿಂಗ್ ಪರೀಕ್ಷೆಯ ವಸ್ತ್ರಸಂಹಿತೆ ಕುರಿತು ಮಾಹಿತಿ ಬಿಡುಗಡೆ ಮಾಡಿದೆ.

ಪರೀಕ್ಷೆಯನ್ನು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸುವ ಸಲುವಾಗಿ ಪ್ರಾಧಿಕಾರವು ಪರೀಕ್ಷಾ ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಅನ್ನು ಜಾರಿ ಮಾಡಿ, ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು, ಈ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಪರೀಕ್ಷೆಯ ವೇಳಾಪಟ್ಟಿ

ದಿನಾಂಕ 19-07-2025 ರಂದು ಮಧ್ಯಾಹ್ನ 02.30 ರಿಂದ 04.30 ರ ವರೆಗೆ ಒಟ್ಟು 100 ಅಂಕಗಳಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಪರೀಕ್ಷಾ ದಿನದ ಮುಖ್ಯ ಸೂಚನೆಗಳು:

  • ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು.
  • ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ.
  • ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ. ಪರೀಕ್ಷಾ ಕೊಠಡಿಯಲ್ಲಿ ನಿಷೇಧಿಸಲಾದ ವಸ್ತುಗಳು
  • ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
  • ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ.
  • ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ.
  • ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.
  • ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
  • ತಲೆಯ ಮೇಲೆ ಟೋಪಿ/ HAT ಧರಿಸುವಂತಿಲ್ಲ.
  • ಯಾವುದೇ ರೀತಿಯ ಮುಖ ಮುಚ್ಚುವಂತ ಮಾಸ್ಕನ್ನು ಧರಿಸುವಂತಿಲ್ಲ.

ಪುರುಷ ಅಭ್ಯರ್ಥಿಗಳ ಡ್ರೆಸ್ ಕೋಡ್:

  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ ಧರಿಸುವಂತಿಲ್ಲ. ಅರ್ಧ ತೋಳಿನ ಶರ್ಟ್‌ ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್‌ರಹಿತ ಸಾಧಾರಣ ಶರ್ಟ್/ ಟಿ-ಶರ್ಟ್ ಧರಿಸಲು ಆದ್ಯತೆ ನೀಡುವುದು.
  • ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
  • ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ (ZIP) ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.
  • ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬೇಕು.
  • ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ಡ್ರೆಸ್ ಕೋಡ್:

  • ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಜ್‌ ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ಮೇಲೆ ಉಲ್ಲೇಖಿಸಿರುವ ಬಗೆಯಲ್ಲಿ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
  • ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  • ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ವಿಶೇಷ ಸೂಚನೆ:

ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ಕೆಇಎ ತಿಳಿಸಿದೆ.

Important Direct Links:

Free Coaching Exam Dress Code 2025 PDFDownload
Official WebsiteKea.Kar.Nic.in
More UpdatesKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment