ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ಕೋಚಿಂಗ್ ನೀಡುವುದಕ್ಕಾಗಿ ಪ್ರವೇಶ ಪರೀಕ್ಷೆಯನ್ನು ದಿನಾಂಕ: ಜನವರಿ 12, 2025 ರಂದು ನಡೆಸಿತ್ತು. ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ಜ.20 ರಂದು ಬಿಡುಗಡೆ ಮಾಡಲಾಗಿತ್ತು. ಆಕ್ಷೇಪಣೆ ಸಲ್ಲಿಸಿಸಲು ಅವಕಾಶ ಕಲ್ಪಿಸಲಾಗಿತ್ತು, ಕೆಇಎಯು ಅಭ್ಯರ್ಥಿಗಳು ಸಲ್ಲಿಸದ ಆಕ್ಷೇಪಣೆಯನ್ನು ಪರಿಶೀಲಿಸದ ನಂತರ ಅಂತಿಮ ಅಂಕಪಟ್ಟಿ ಹಾಗೂ ಫಲಿತಾಂಶ(KEA Free coaching Result 2025)ವನ್ನು ಜ.27 ಬಿಡುಗಡೆ ಮಾಡಿದೆ.
ಪ್ರಾಧಿಕಾರವು ಪ್ರಕಟಿಸಿದ ಅಂತಿಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಲು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ.