ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಲ್ಯಾಣ ಕರ್ನಾಟಕ ವೃಂದದ ವಿವಿಧ ಇಲಾಖೆ/ಸಂಸ್ಥೆ/ಮಂಡಳಿಯಲ್ಲಿನ ಗ್ರೂಪ್ ಸಿ ಹುದ್ದೆಗಳ ಭರ್ತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಡಿ.14ರಂದು ಬಿಡುಗಡೆ ಮಾಡಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿನ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಡಿ.20 ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ. ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. ಡಿ.20 ಮತ್ತು 22ರಂದು ನಡೆಯಲಿರುವ ನಿರ್ದಿಷ್ಟ ಪತ್ರಿಕೆಗಳ ಪರೀಕ್ಷೆಯು ಬೆಂಗಳೂರು ನಗರದಲ್ಲಿ ನಡೆಯಲಿವೆ ಎಂದು ಪ್ರಾಧಿಕಾರ ಹೊರಡಿಸಿದ ಪ್ರಕಟಣೆಯಲ್ಲಿ ಸ್ಪಷ್ಟಣೆ ನೀಡಲಾಗಿದೆ.
ಕೆಇಎ ಹಾಲ್ ಟಿಕೆಟ್ ಡೌನ್ಲೋಡ್ ಮಾಡುವುದು ಹೇಗೆ.?
ಹಂತ-1 ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ
ಹಂತ-2 ಮುಂದೆ “ಇತ್ತೀಚಿನ ಪ್ರಕಟಣೆಗಳು” ಶಿರ್ಷೀಕೆಯಡಿ ನೀಡಲಾದ “14-12 ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಟಿಕೆಟ್ ಲಿಂಕ್ (ಕಲ್ಯಾಣ ಕರ್ನಾಟಕ) 14/12/2025” ಲಿಂಕ್ ಮೇಲೆ ಒತ್ತಿ.
ಹಂತ-3 ಮತ್ತೊಂದು ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ಪರೀಕ್ಷೆ ಹೆಸರು, ಅರ್ಜಿ ಸಂಖ್ಯೆ, ಅಭ್ಯರ್ಥಿಯ ಹೆಸರು ತುಂಬಿಕೊಂಡು “ಸಲ್ಲಿಸು” ಗುಂಡಿ ಮೇಲೆ ಒತ್ತುವ ಮೂಲಕ ತಮ್ಮ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Important Direct Links:
| KEA Group C (HK) Exam Hall Ticket 2025 Link | Download |
| Official Website | cetonline.karnataka.gov.in/kea |
| More Updates | KarnatakaHelp.in |
Good
Plz hall ticket