ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ‘ತನಿಖಾಧಿಕಾರಿ’ ನೇಮಕಾತಿ

ಅರ್ಜಿ ಸಲ್ಲಿಕೆಗೆ ಡಿ.16ರ ಗಡುವು

Published on:

ಬೆಂಗಳೂರು: ರಾಜ್ಯ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಜವಳಿ ತನಿಖಾಧಿಕಾರಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಉಳಿಕೆ ಮೂಲ ವೃಂದ(ಆರ್‌ಪಿಸಿ) 22 ಹುದ್ದೆ, ಕಲ್ಯಾಣ-ಕರ್ನಾಟಕ ವೃಂದ(ಕೆಕೆ) 05 ಹುದ್ದೆ ಸೇರಿದಂತೆ ಒಟ್ಟು 27 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ- ನವೆಂಬರ್ 18
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 16
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ- ಡಿಸೆಂಬರ್ 17
  • ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ದಿನಾಂಕ: 08-01-2027
  • ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ- ಶೀಘ್ರದಲ್ಲೇ ಪ್ರಕಟ

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಕೆಳಗಿನ ಯಾವುದಾದರೊಂದು ವಿದ್ಯಾರ್ಹತೆಯನ್ನು ಹೊಂದಿರಬೇಕು:

ಡಿಪ್ಲೊಮಾ ಇನ್ ಟೆಕ್ಸ್‌ಟೈಲ್ಸ್ (Diploma in Textiles) ಅಥವಾ ಹ್ಯಾಂಡ್ಲೂಮ್ ಟೆಕ್ನಾಲಜಿ (Handloom Technology) ಅಥವಾ ಡಿಪ್ಲೊಮಾ ಇನ್ ಟೆಕ್ಸ್‌ಟೈಲ್ಸ್ ಟೆಕ್ನಾಲಜಿ (Diploma in Textiles Technology) ಅಥವಾ ಡಿಪ್ಲೊಮಾ ಇನ್ ಹ್ಯಾಂಡ್ಲೂಮ್ ಅಂಡ್ ಟೆಕ್ಸ್‌ಟೈಲ್ ಟೆಕ್ನಾಲಜಿ (Diploma in Handloom and Textile Technology).

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು.

ಸರ್ಕಾರದ ಆದೇಶದನ್ವಯ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದ್ದು, ಪರಿಷ್ಕೃತ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:

  • ಸಾಮಾನ್ಯ ಅರ್ಹತೆ(ಜಿಎಂ) ಗರಿಷ್ಠ 40 ವರ್ಷಗಳು
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷಗಳು
  • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳು

(ಮಾಜಿ ಸೈನಿಕರು, ವಿಶೇಷ ಚೇತನರು, ವಿಧವೆಯರು ಹಾಗೂ ಇತರ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ).

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ಆಯ್ಕೆಯನ್ನು ಆಫ್‌ಲೈನ್-ಓಎಂಆರ್ ಮಾದರಿಯ(Offline-OMR type) ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ.

  • ಕನ್ನಡ ಭಾಷಾ ಪರೀಕ್ಷೆ: ಎಸ್‌ಎಸ್‌ಎಲ್‌ಸಿ ಅಥವಾ ಅದಕ್ಕಿಂತ ಮೇಲ್ಪಟ್ಟ ಹಂತದಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದದ ಅಭ್ಯರ್ಥಿಗಳಿಗೆ 150 ಅಂಕಗಳ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ಅರ್ಹತೆ ಪಡೆಯಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು.
  • ಸ್ಪರ್ಧಾತ್ಮಕ ಪರೀಕ್ಷೆ:
    • ಪತ್ರಿಕೆ-1 (ಸಾಮಾನ್ಯ ಜ್ಞಾನ): 100 ಪ್ರಶ್ನೆಗಳು, 100 ಅಂಕಗಳು, ಅವಧಿ 2 ಗಂಟೆ.
    • ಪತ್ರಿಕೆ-2 (ನಿರ್ದಿಷ್ಟ ಪತ್ರಿಕೆ): 100 ಪ್ರಶ್ನೆಗಳು, 100 ಅಂಕಗಳು, ಅವಧಿ 2 ಗಂಟೆ.
    • ಋಣಾತ್ಮಕ ಮೌಲ್ಯಮಾಪನ: ಪ್ರತಿ ತಪ್ಪು ಉತ್ತರಕ್ಕೆ 0.25 (ನಾಲ್ಕನೇ ಒಂದು ಭಾಗ) ಅಂಕಗಳನ್ನು ಕಡಿತಗೊಳಿಸಲಾಗುವುದು.
    • ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಕನಿಷ್ಠ ಶೇ.35 ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.

ಸಂಬಳ (ವೇತನ ಶ್ರೇಣಿ):

ಆಯ್ಕೆಯಾದ ಅಭ್ಯರ್ಥಿಗಳಿಗೆ, ವೇತನ ಶ್ರೇಣಿ ಮಾಸಿಕ ₹54,175 ರಿಂದ ₹99,400 ಇರಲಿದೆ. ನೇಮಕಗೊಂಡ ಅಭ್ಯರ್ಥಿಗಳು 2 ವರ್ಷಗಳ ಖಾಯಂಪೂರ್ವ(Probationary) ಅವಧಿಯಲ್ಲಿರುತ್ತಾರೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗಿದ್ದು, ವಿವರಗಳು ಹೀಗಿವೆ:

  • ಸಾಮಾನ್ಯ ಅರ್ಹತೆ ಮತ್ತು ಇತರ ಹಿಂದುಳಿದ ಪ್ರವರ್ಗಗಳ(2ಎ/2ಬಿ/3ಎ/3ಬಿ) ಅಭ್ಯರ್ಥಿಗಳಿಗೆ ₹750/-
  • ಪರಿಶಿಷ್ಟ ಜಾತಿ(ಎಸ್‌ಸಿ)/ಪರಿಶಿಷ್ಟ ಪಂಗಡ(ಎಸ್‌ಟಿ)/ಪ್ರವರ್ಗ-1/ಮಾಜಿ ಸೈನಿಕ/ತೃತೀಯ ಲಿಂಗದ ಅಭ್ಯರ್ಥಿಗಳಿಗೆ ₹500/-
  • ವಿಶೇಷಚೇತನ ಅಭ್ಯರ್ಥಿಗಳಿಗೆ ₹250/-

ಅರ್ಜಿ ಸಲ್ಲಿಕೆ ಹೇಗೆ?

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್: https://cetonline.karnataka.gov.in/kea/ನ “ಕೈಮಗ್ಗ ಮತ್ತು ಜವಳಿ ಇಲಾಖೆಗಳಲ್ಲಿನ ‘ಗ್ರೂಪ್-ಸಿ’ ಜವಳಿ ತನಿಖಾಧಿಕಾರಿ ನೇಮಕಾತಿ (ಆರ್‌ಪಿಸಿ – RPC ಅಥವಾ ಕೆಕೆ- KK) – 2026” ವಿಭಾಗದಲ್ಲಿ ಲಭ್ಯವಿರುವ ಆನ್‌ಲೈನ್‌ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೆಇಎ ಮಾಹಿತಿ ಕೇಂದ್ರದ ದೂರವಾಣಿ ಸಂಖ್ಯೆ: 080-23460460 ಅನ್ನು ಸಂಪರ್ಕಿಸಬಹುದು(ಬೆಳಿಗ್ಗೆ 10.00 ರಿಂದ ಸಂಜೆ 6.00 ರವರೆಗೆ).

ಮುಖ್ಯ ಲಿಂಕ್‌ಗಳು:

ಅಧಿಕೃತ ಅಧಿಸೂಚನೆ(ಕೆಕೆ) ಪಿಡಿಎಫ್‌ ಲಿಂಕ್ಡೌನ್ಲೋಡ್‌ ಮಾಡಿ
ಅಧಿಕೃತ ಅಧಿಸೂಚನೆ(ಆರ್‌ಪಿಸಿ) ಪಿಡಿಎಫ್‌ ಲಿಂಕ್ಡೌನ್ಲೋಡ್‌ ಮಾಡಿ
ಆನ್‌ಲೈನ್‌ ಅರ್ಜಿ ನಮೂನೆ ಲಿಂಕ್‌ಈಗಲೇ ಅರ್ಜಿ ಸಲ್ಲಿಸಿ
ಅಧಿಕೃತ ಜಾಲತಾಣkea.kar.nic.in
ಮತ್ತಷ್ಟು ಸುದ್ದಿಗಳಿಗಾಗಿಕರ್ನಾಟಕ ಹೆಲ್ಪ್.‌ಇನ್

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment