ಸ.ತೋಟಗಾರಿಕೆ ನಿರ್ದೇಶಕರ ನೇಮಕ ಪರೀಕ್ಷೆಯ ಕೀ ಉತ್ತರ ಬಿಡುಗಡೆ

Published on:

ಬೆಂಗಳೂರು ಅ.06: ತೋಟಗಾರಿಕೆ ಇಲಾಖೆಯ ಕಲ್ಯಾಣ ಕರ್ನಾಟಕ(ಕೆಕೆ) ವೃಂದದ ಸಹಾಯಕ ತೋಟಗಾರಿಕೆ ನಿರ್ದೇಶಕ(ಎಹೆಚ್‌ಡಿ) ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅ.06ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಅಂದೇ ಪತ್ರಿಕೆ-1 ಮತ್ತು ಪತ್ರಿಕೆ-2ರ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿದೆ.

ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kea/indexnewದ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್‌ ಮಾಡಿಕೊಂಡು ಪರಿಶೀಲನೆ ಮಾಡಿಕೊಳ್ಳಬಹುದು.

ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅ.08 ಬೆಳಗ್ಗೆ 10:30ರೊಳಗೆ ನಿಗದಿತ ಪೂರಕ ದಾಖಲೆಗಳನ್ನು ಸಲ್ಲಿಸಿ ಹಾಗೂ ಪತ್ರಿ ಆಕ್ಷೇಪಣೆಗೆ ರೂ.25ರಂತೆ ಪಾವತಿಸುವ ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ಆಕ್ಷೇಪಣೆ ಸಲ್ಲಿಸುವಾಗ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್‌ ಕೋಡ್‌ ಮತ್ತು ಪ್ರಶ್ನೆ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಿರಬೇಕು.

ಪ್ರಮುಖ ಲಿಂಕ್ಗಳು:

ಕೀ ಉತ್ತಗಳ ಪಿಡಿಎಫ್‌ ಲಿಂಕ್ಡೌನ್ಲೋಡ್‌ ಮಾಡಿ
ಆಕ್ಷೇಪಣೆ ಸಲ್ಲಿಕೆ ಲಿಂಕ್ಆಕ್ಷೇಪಣೆ ಸಲ್ಲಿಸಿ
ಅಧಿಕೃತ ಜಾಲತಾಣkea.kar.nic.in
ಮತ್ತಷ್ಟು ಸುದ್ದಿಗಳಿಗಾಗಿಕರ್ನಾಟಕ ಹೆಲ್ಪ್‌.ಇನ್
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment