ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗಾಗಿ ಮೇ 31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ.
2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಮತ್ತು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಜೂನ್ 4ರಂದು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು, ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಪತ್ರಿಕೆಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಂಡಿರುವ ಕೀ ಉತ್ತರಗಳನ್ನು ಪ್ರಕಟಿಸಿದೆ.
ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.