ಕೆಇಎ: ಜ.10, 11ರ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

Published on:

ಫಾಲೋ ಮಾಡಿ
KEA January 10, 11 Exam Hall Ticket 2026
ಕೆಇಎ: ಜ.10, 11ರ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ವಿವಿಧ ಇಲಾಖೆಯ ಮೂಲ ಉಳಿಕೆ ವೃಂದದ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜ.10 ಮತ್ತು 11ರಂದು ನಡೆಸಲಿರುವ ಪರೀಕ್ಷೆಗಳ ಪ್ರವೇಶ ಪತ್ರವನ್ನು ಸೋಮವಾರ ಬಿಡುಗಡೆಗೊಳಿಸಿದೆ.

ಜ.10ರಂದು ಮಧ್ಯಾಹ್ನ 3 ರಿಂದ 5ರವೆರೆಗೆ ಕಿರಿಯ ಅಧಿಕಾರಿ (ಗುಣ ಮತ್ತು ಆಶ್ವಾಸನೆ), ಕಿರಿಯ ಅಭಿಯಂತರ(ಸಿವಿಲ್), ಕಿರಿಯ ಅಭಿಯಂತರ (ಮೆಕ್ಯಾನಿಕಲ್), ಕಿರಿಯ ಅಭಿಯಂತರ(ಎಲೆಕ್ಟ್ರಿಕಲ್) ಹುದ್ದೆಗಳ ನಿರ್ದಿಷ್ಟ ಪರೀಕ್ಷೆ ಹಾಗೂ ಜ.11ಕ್ಕೆ ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30ರವೆರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2:30 ರಿಂದ 4:30ರವೆರೆಗೆ ಕನ್ನಡ, ಇಂಗ್ಲೀಷ್‌ ಮತ್ತು ಕಂಪ್ಯೂಟರ್‌ ಜ್ಞಾನ ವಿಷಯಕ್ಕೆ ಸಂಬಂಧಿಸಿದ ಪರೀಕ್ಷೆ ಜರುಗಲಿವೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಲಿಂಕ್‌ https://cetonline.karnataka.gov.in/KEA_EXAM_PORTAL/Forms/Candidates/Loginಗೆ ಭೇಟಿ ತಮ್ಮ ಅರ್ಜಿ ಸಂಖ್ಯೆ ಮತ್ತು ಹೆಸರು ನಮೂದಿಸುವ ಮೂಲಕ ಪ್ರವೇಶ ಪತ್ರ ಪಡೆದುಕೊಳ್ಳಬಹುದು.

About the Author

ನಾನು 2021 ರಿಂದ ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ತೊಡಗಿಕೊಂಡಿರುವೆ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment