ಕೆಇಎ ಜ.25ರ ಸ್ಪರ್ಧಾತ್ಮಕ ಪರೀಕ್ಷೆಯ ಹಾಲ್‌ ಟಿಕೆಟ್‌ ಬಿಡುಗಡೆ

Published on:

ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ನಿಗಮದ ಮೂಲ ಉಳಿಕೆ ವೃಂದದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಸಂಬಂಧ ಜ.25ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಂಗಳವಾರ ಬಿಡುಗಡೆಗೊಳಿಸಿದೆ.

ಸಾಮಾನ್ಯ ಜ್ಞಾನ-2 ಪತ್ರಿಕೆ ಬೆಳಗ್ಗೆ 10:30 ರಿಂದ 12:30ರವೆರೆಗೆ ಹಾಗೂ ಕನ್ನಡ, ಇಂಗ್ಲೀಷ್‌, ಕಂಪ್ಯೂಟರ್‌ ಜ್ಞಾನ-2 ಪತ್ರಿಕೆ ಮಧ್ಯಾಹ್ನ 02:30ರಿಂದ ಸಂಜೆ 4:30ರವರೆಗೆ ಜರುಗಲಿದೆ. ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡಿರುವ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣದ ಲಿಂಕ್‌ https://www.cetonline.karnataka.gov.in/KEA_EXAM_PORTAL/Forms/Candidates/Login ಮೂಲಕ ತಮ್ಮ ಹಾಲ್‌ ಟಿಕೆಟ್‌ ಡೌನ್ಲೋಡ್‌ ಮಾಡಿಕೊಳ್ಳಬಹುದು.

ಕೃಷಿ ಮಾರುಕಟ್ಟೆ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ರಾಜ್ಯ ಸಣ್ಣ ಪ್ರಮಾಣದ ಕೈಗಾರಿಕಾ ಅಭಿವೃದ್ಧಿ ನಿಗಮ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಸಂಸ್ಥೆಯಲ್ಲಿನ ಹುದ್ದೆಗಳ ಭರ್ತಿಗಾಗಿ ಪರೀಕ್ಷೆ ಜರುಗುತ್ತಿದೆ.

ಕೆಇಎ ಜ.25ರ ಪರೀಕ್ಷೆಯ ಹಾಲ್‌ ಟಿಕೆಟ್‌ ಹೇಗೆ ಡೌನ್ಲೋಡ್‌ ಮಾಡುವುದು?

ಹಂತ-1 ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.

ಹಂತ-2 ನಂತರ ನೇಮಕಾತಿ ವಿಭಾಗದಲ್ಲಿ → ವಿವಿಧ ಇಲಾಖೆಗಳ ನೇಮಕಾತಿ(NON-HK)-2025 → “ವಿವಿಧ ಇಲಾಖೆಗಳ ನೇಮಕಾತಿ (HK)- 2025 25-01-2026 ರಂದು ನಡೆಯಲಿರುವ ಪರೀಕ್ಷೆಯ ಪ್ರವೇಶ ಟಿಕೆಟ್ ಡೌನ್‌ಲೋಡ್ ಲಿಂಕ್.20/01/2026” ಲಿಂಕ್‌ ಮೇಲೆ ಒತ್ತಿ.

Kea Exam Hall Ticket 2026 Link
Kea Exam Hall Ticket 2026 Link

ಹಂತ-3 ನಿಮ್ಮ ಲಾಗಿನ್‌ ವಿವರ ಭರ್ತಿ ಮಾಡುವ ಮೂಲಕ ಹಾಲ್‌ ಟಿಕೆಟ್‌ ಡೌನ್ಲೋಡ್‌ ಮಾಡಿಕೊಳ್ಳಬಹುದು.

Important Direct Links:

KEA January 25 Exam Hall Ticket 2026 LinkDownload
Official Websitecetonline.karnataka.gov.in/kea
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

1 thought on “ಕೆಇಎ ಜ.25ರ ಸ್ಪರ್ಧಾತ್ಮಕ ಪರೀಕ್ಷೆಯ ಹಾಲ್‌ ಟಿಕೆಟ್‌ ಬಿಡುಗಡೆ”

Leave a Comment