ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೇ 31 ಮತ್ತು ಜೂನ್ 2ರಂದು ನಡೆಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಧಿಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿ:31-05-2025 ಹಾಗೂ ದಿ:02-06-2025 ರಂದು ನಡೆಸಲಾದ ವಿವಿಧ ಪ್ರವೇಶ ಪರೀಕ್ಷೆಗಳ ಕೀ ಉತ್ತರವನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/keaobjections/forms/login.aspx ಗೆ ಭೇಟಿ ನೀಡಿ. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
31-05-2025 ರಂದು ನಡೆಸಲಾದ ಪ್ರವೇಶ ಪರೀಕ್ಷೆಗಳ ವಿವರ
2025-26ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರಾದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಪ್ರವೇಶ ಪರೀಕ್ಷೆ & ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಪ್ರವೇಶ ಪರೀಕ್ಷೆ.
KEA Free IAS KAS Free Coaching Exam 2025 Key Answer PDF
KEA IAS & KAS Key Answer 2025 | Download |
ಡಿಸಿಇಟಿ-2025 ಪ್ರವೇಶ ಪರೀಕ್ಷೆ:
KEA DCET Key Answer 2025 | Download |
02-06-2025 ರಂದು ನಡೆಸಲಾದ ಪ್ರವೇಶ ಪರೀಕ್ಷೆಗಳ ವಿವರ
ಪಿಜಿ ಸಿಇಟಿ-2025 ರ Computer Science Engineering ವಿಷಯದ ಪ್ರವೇಶ ಪರೀಕ್ಷೆ(CBT), ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು (Response Sheets) ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಆಕ್ಷೇಪಣೆ ಸಲ್ಲಿಸಬಹುದು;
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ. ದಿನಾಂಕ:06-06-2025 ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದಾಗಿರುತ್ತದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್. ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು.
ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಅಪೂರ್ಣ/ಆಧಾರ ರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ವಿಶೇಷ ಸೂಚನೆ:
ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ.
How to Download Kea Key Answer 2025
ಕೀ ಉತ್ತರ ನೋಡುವ ವಿಧಾನ;
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
- ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ – ನಿಮ್ಮ ಆಯ್ಕೆಯ ಪ್ರವೇಶ ಪರೀಕ್ಷೆಯ ಕೀ ಉತ್ತರಗಳು ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಪ್ರವೇಶ ಪರೀಕ್ಷೆಯ ಕೀ ಉತ್ತರ ಪರದೆಯ ಮೇಲೆ ಕಾಣುತ್ತದೆ.
- ಅಭ್ಯರ್ಥಿಗಳು ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಆಕ್ಷೇಪಣೆ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಲ್ಲಿಸಿ.
Important Direct Links:
Kea Key Answer 2025 Notice PDF | Download |
KEA Key Answer 2025 Objection Link | Objection |
More Updates | Karnataka Help.in |