ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಯ ಕ.ಕ ವೃಂದದ ಗ್ರೂಪ್ ಸಿ ಹುದ್ದೆಗಳ ಭರ್ತಿಗಾಗಿ ಡಿ.20 ರಿಂದ ಡಿ.22ರವೆರೆಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ.
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು https://cetonline.karnataka.gov.in/vaoresult/hkrec2025.aspxನಲ್ಲಿ ಬಿಡುಗಡೆಗೊಳಿಸಲಾಗಿದೆ. ಸದರಿ ಫಲಿತಾಂಶಕ್ಕೆ ಜ.1ರ ಮಧ್ಯಾಹ್ನ 12ರೊಳಗೆ https://forms.gle/eHjMwSMML874KaUG9ನ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ಹೊರಡಿಸಿದ ಪ್ರಕಟಣೆ ತಿಳಿಸಿದೆ.


