KREIS EMRS 2026: ತಾತ್ಕಾಲಿಕ ಫಲಿತಾಂಶ ಪ್ರಕಟ

Published on:

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾ.01ರಂದು ನಡೆಸಿದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ.

ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ಜಾಲತಾಣ https://cetonline.karnataka.gov.in/vaoResult/kreis2026.aspxದಲ್ಲಿ ಬಿಡುಗಡೆ ಮಾಡಲಾಗಿದೆ. ಸದರಿ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಪೂರಕ ದಾಖಲೆಗಳನ್ನು ಒದಗಿಸಿ, ಮಾ.18ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು.

ಫಲಿತಾಂಶ ಹೇಗೆ ನೋಡುವುದು.?

ಹಂತ-1 ಅಧಿಕೃತ ಜಾಲತಾಣ https://cetonline.karnataka.gov.in/kea/indexnewಕ್ಕೆ ಭೇಟಿ ನೀಡಿ.

ಹಂತ-2 ಮುಂದೆ “ಪ್ರವೇಶಗಳು“, ನಂತರ “ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS)/ಏಕಲವ್ಯ ಮಾದರಿ ವಸತಿ ಶಾಲೆ (EMRS)) ಪ್ರವೇಶ-2026“, ತದನಂತರ “KREIS /EMRS -2026 ತಾತ್ಕಾಲಿಕ ಫಲಿತಾಂಶ ಲಿಂಕ್. 17-03-2026” ಮೇಲೆ ಒತ್ತಿ.

Kreis Emrs 2026
Kreis &Amp; Emrs 2026 Admission Provisional Result Link

ಹಂತ-3 ಕೊನೆಗೆ ಹೊಸಪುಟ ತೆರೆಯುತ್ತದೆ, ಅಲ್ಲಿ ವಿದ್ಯಾರ್ಥಿಯ ಸ್ಯಾಟ್ಸ್‌ ಐಡಿ ಮತ್ತು ಹುಟ್ಟಿದ ದಿನಾಂಕ ನಮೂದಿಸಿ “ಸಲ್ಲಿಸು” ಬಟನ್‌ ಮೇಲೆ ಒತ್ತುವ ಮೂಲಕ ತಾತ್ಕಾಲಿಕ ಫಲಿತಾಂಶ ವಿಕ್ಷೀಸಬಹುದು.

Important Direct Links:

KEA KREIS EMRS 2026 Admission Provisional Result Check LinkCheck Now
Official Websitekea.kar.nic.in
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

14 thoughts on “KREIS EMRS 2026: ತಾತ್ಕಾಲಿಕ ಫಲಿತಾಂಶ ಪ್ರಕಟ”

Leave a Comment