ಭೂಮಾಪಕ(ಆರ್‌ಪಿಸಿ) ಪರೀಕ್ಷೆ; ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Published on:

ಬೆಂಗಳೂರು ಅ.16: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಉಳಿಕೆ ಮೂಲ ವೃಂದದ ಗ್ರೂಪ್-ಸಿ ಭೂಮಾಪಕ ಹುದ್ದೆಗಳ ಭರ್ತಿ ಸಂಬಂಧ ಅ.02ರಂದು ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.

ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನೊಳಗೊಂಡ ತಾತ್ಕಾಲಿಕ ಫಲಿತಾಂಶವನ್ನು ಅ.09ರಂದು ಪ್ರಕಟಿಸಿ, ಅ.11ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಅದರಂತೆ ಈ ಅವಧಿಯಲ್ಲಿ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/landrpc2026ದಲ್ಲಿ ಪ್ರಚುರಪಡಿಸಲಾಗಿದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.

ಕೀ ಉತ್ತರಗಳನ್ನು ಅ.03ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅ.05ರವರೆಗೆ ಅವಕಾಶ ನೀಡಲಾಗಿತ್ತು. ಅದರಂತೆ ಸಲ್ಲಿಸಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ ಮಾಡಿ, ಇದರನ್ವಯ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿತ್ತು.

ಭೂಮಾಪಕ(ಆರ್‌ಪಿಸಿ) ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪಿಡಿಎಫ್

ತಾತ್ಕಾಲಿಕ ಅಂಕಪಟ್ಟಿ ಪಿಡಿಎಫ್‌ ಲಿಂಕ್ಡೌನ್ಲೋಡ್‌ ಮಾಡಿ
ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಕನಿಷ್ಠ 35% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಿ ಅಂತಿಮ ಅಂಕಪಟ್ಟಿಯನ್ನು ಅ.17ರಂದು ಪ್ರಕಟಿಸಿ, ಇಲಾಖೆಗೆ ಅಂತಿಮ ಅಂಕಪಟ್ಟಿಯನ್ನು ಹಸ್ತಾಂತರಿಸಲಾಗುತ್ತದೆ ಹಾಗೂ ನೇಮಕಾತಿ ಪ್ರಾಧಿಕಾರದಿಂದ ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸುವರು.
ಹೆಚ್.ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕರು, ಕೆಇಎ
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

Leave a Comment