ಕೆಇಎ: ಪೌರಾಡಳಿತ ನಿರ್ದೇಶನಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಅರ್ಜಿ ಗಡುವು ವಿಸ್ತರಣೆ

Published on:

Updated On:

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೌರಾಡಳಿತ ನಿರ್ದೇಶನಾಲಯದ ಅಧೀನದಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಡಿ ಖಾಲಿಯಿರುವ 210 ವಿವಿಧ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ನೀರು ಸರಬರಾಜು ಆಪರೇಟರ್ 80 ಹುದ್ದೆ, ಸಹಾಯಕ ನೀರು ಸರಬರಾಜು ಆಪರೇಟರ್ 122 ಹುದ್ದೆ, ಎಲೆಕ್ನಿಷಿಯನ್ ಗ್ರೇಡ್-1 03 ಹುದ್ದೆ ಮತ್ತು ಎಲೆಕ್ನಿಷಿಯನ್ ಗ್ರೇಡ್-2 05 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ ಪ್ರಕ್ರಿಯೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಜೊತೆಗೆ ಆಯಾ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರು. ಆಸಕ್ತ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kea/indexnew ಕ್ಕೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

  • ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ- ಸೆಪ್ಟೆಂಬರ್‌ 16
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್‌ 07(ವಿಸ್ತರಣೆ)
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ- ಅಕ್ಟೋಬರ್ 08(ವಿಸ್ತರಣೆ)
  • ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ಮಾಹೆ/ತಿಂಗಳು- ನವೆಂಬರ್-2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆವಾರು ಶೈಕ್ಷಣಿಕ ಅರ್ಹತೆಗಳು ಹೀಗಿವೆ:

ನೀರು ಸರಬರಾಜು ಆಪರೇಟರ್ ಹುದ್ದೆಗೆ; ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಕೈಗಾರಿಕಾ ತರಬೇತಿ ಸಂಸ್ಥೆಯಿಂದ(ಐಟಿಐ) ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್‌ನಲ್ಲಿ 2 ವರ್ಷಗಳ ಕೋರ್ಸ್ ಮುಗಿಸಿ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರ(ಎನ್‌ಟಿಸಿ) ಹೊಂದಿರಬೇಕು.

ಯಾವುದೇ ಟ್ರೇಡ್‌ನಲ್ಲಿ 1 ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿ ಪೂರ್ಣಗೊಳಿಸಿ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಪ್ರಮಾಣಪತ್ರ(ಎನ್‌ಎಸಿ) ಪಡೆದಿರಬೇಕು.

ಎಲೆಕ್ನಿಷಿಯನ್ ಗ್ರೇಡ್-1 ಹುದ್ದೆಗೆ; ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಕೈಗಾರಿಕಾ ತರಬೇತಿ ಸಂಸ್ಥೆಯಿಂದ(ಐಟಿಐ) ಎಲೆಕ್ಟ್ರಿಕಲ್ ಟ್ರೇಡ್‌ನಲ್ಲಿ 2 ವರ್ಷಗಳ ಕೋರ್ಸ್ ಮುಗಿಸಿ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ(ಎನ್‌ಟಿಸಿ) ಹೊಂದಿರಬೇಕು.

ಯಾವುದೇ ಟ್ರೇಡ್‌ನಲ್ಲಿ 1 ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿ ಪೂರ್ಣಗೊಳಿಸಿ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಪ್ರಮಾಣಪತ್ರ(ಎನ್‌ಎಸಿ) ಪಡೆದಿರಬೇಕು.

ಸಹಾಯಕ ನೀರು ಸರಬರಾಜು ಆಪರೇಟರ್ ಹುದ್ದೆಗೆ; ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಕೈಗಾರಿಕಾ ತರಬೇತಿ ಸಂಸ್ಥೆಯಿಂದ(ಐಟಿಐ) ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್‌ನಲ್ಲಿ 2 ವರ್ಷಗಳ ಕೋರ್ಸ್ ಮುಗಿಸಿ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ(ಎನ್‌ಟಿಸಿ) ಹೊಂದಿರಬೇಕು.

ಎಲೆಕ್ನಿಷಿಯನ್ ಗ್ರೇಡ್-2 ಹುದ್ದೆಗೆ; ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಜೊತೆಗೆ ಕೈಗಾರಿಕಾ ತರಬೇತಿ ಸಂಸ್ಥೆಯಿಂದ(ಐಟಿಐ) ಎಲೆಕ್ಟ್ರಿಕಲ್ ಟ್ರೇಡ್‌ನಲ್ಲಿ 2 ವರ್ಷಗಳ ಕೋರ್ಸ್ ಮುಗಿಸಿ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರ(ಎನ್‌ಟಿNTC) ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಸರ್ಕಾರದ ಆದೇಶದನ್ವಯ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದ್ದು, ಪರಿಷ್ಕೃತ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:

  • ಸಾಮಾನ್ಯ ಅರ್ಹತೆ (GM) ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷಗಳು
  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳು

ಮಾಜಿ ಸೈನಿಕರು, ವಿಧವೆಯರು, ವಿಶೇಷ ಚೇತನರು ಹಾಗೂ ಜೀತ ಕಾರ್ಮಿಕ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ಆಯ್ಕೆಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ.

  • ಸ್ಪರ್ಧಾತ್ಮಕ ಪರೀಕ್ಷೆ [ಆನ್‌ಲೈನ್ (CBT) ಅಥವಾ ಆಫ್‌ಲೈನ್-ಓಎಂಆರ್ ವಿಧಾನ]
  • ದಾಖಲಾತಿ ಪರಿಶೀಲನೆ

ಸಂಬಳ:

ಹುದ್ದೆಯ ಹೆಸರುವೇತನ ಶ್ರೇಣಿ (ರೂ.ಗಳಲ್ಲಿ)
ನೀರು ಸರಬರಾಜು ಆಪರೇಟರ್ರೂ.37,500 ರಿಂದ 76,100
ಎಲೆಕ್ನಿಷಿಯನ್ ಗ್ರೇಡ್-1ರೂ.37,500 ರಿಂದ 76,100
ಸಹಾಯಕ ನೀರು ಸರಬರಾಜು ಆಪರೇಟರ್ರೂ.34,100 ರಿಂದ 67,600
ಎಲೆಕ್ನಿಷಿಯನ್ ಗ್ರೇಡ್-2ರೂ.34,100 ರಿಂದ 67,600

ಅರ್ಜಿ ಶುಲ್ಕ:

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕಾಗಿರುತ್ತದೆ.

  • ಸಾಮಾನ್ಯ ವರ್ಗ ಮತ್ತು ಇತರೆ ಪ್ರವರ್ಗಗಳ ಅಭ್ಯರ್ಥಿಗಳಿಗೆ ರೂ.750/-
  • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ/ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ರೂ.500/-
  • ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.250/-

ಅರ್ಜಿ ಸಲ್ಲಿಕೆ ವಿಧಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ. ನಂತರ ಮೆನು ವಿಭಾಗದಲ್ಲಿ “Muncipal Administration (KK)” ವಿಭಾಗದ ಮೇಲೆ ಕ್ಲಿಕ್ಕಿಸಿ. ಮುಂದೆ ಸೆ.16ರಿಂದ ಲಭ್ಯವಾಗುವ “ಆನ್‌ಲೈನ್‌ ಅರ್ಜಿ ನಮೂನೆ ಲಿಂಕ್‌” ಬಳಸಿಕೊಂಡು. ಹೊಸ ಬಳಕೆದಾರರಾಗಿ ನೋಂದಣಿಯಾಗಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ಲಿಂಕ್‌ಗಳು:

ಅರ್ಜಿ ಅವಧಿ ವಿಸ್ತರಣೆ ಪ್ರಕಟಣೆ(29/09/2026)ಡೌನ್ಲೋಡ್‌ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಡೌನ್ಲೋಡ್‌ ಮಾಡಿ
ಹುದ್ದೆಗಳ ವರ್ಗೀಕರಣ ಪಿಡಿಎಫ್ಡೌನ್ಲೋಡ್‌ ಮಾಡಿ
ಆನ್‌ಲೈನ್‌ ಅರ್ಜಿ ನಮೂನೆ ಲಿಂಕ್ಅರ್ಜಿ ಸಲ್ಲಿಸಿ
ಅಧಿಕೃತ ಜಾಲತಾಣkea.kar.nic.in
ಮತ್ತಷ್ಟು ಸುದ್ದಿಗಾಗಿಕರ್ನಾಟಕಹೆಲ್ಪ್‌.ಇನ್
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

3 thoughts on “ಕೆಇಎ: ಪೌರಾಡಳಿತ ನಿರ್ದೇಶನಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ”

Leave a Comment