ಕೆಇಎ: ಫಾರ್ಮಸಿಸ್ಟ್‌ ಅಪ್ರೆಂಟಿಸ್‌ ತರಬೇತಿಗೆ ಅರ್ಜಿ ಪ್ರಾರಂಭ

Published on:

ಫಾಲೋ ಮಾಡಿ
KEA Pharmacist Apprenticeship 2026 Online Form
KEA Pharmacist Apprenticeship 2026

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಡಿ.ಫಾರ್ಮದಲ್ಲಿ ಉತ್ತೀರ್ಣರಾದವರಿಗೆ ಫಾರ್ಮಸಿಸ್ಟ್‌ ಅಪ್ರೆಂಟಿಸ್‌ ತರಬೇತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.

ಒಟ್ಟು 1000 ಸೀಟುಗಳಲ್ಲಿ ಮೊದಲ ಸುತ್ತಿನಲ್ಲಿ 123 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಇನ್ನುಳಿದ ಸೀಟುಗಳನ್ನು ಎರಡನೇ ಸುತ್ತಿನಲ್ಲಿ ಭರ್ತಿ ಮಾಡಿಕೊಳ್ಳಲಿದೆ. ಅಭ್ಯರ್ಥಿಗಳಿಗೆ 11 ತಿಂಗಳು ತರಬೇತಿ ಒದಗಿಸಲಿದೆ. ಸರ್ಕಾರಿ ಕೋಟಾದಡಿ ಆಯ್ಕೆಯಾಗಿದ್ದವರಿಗೆ ಆದ್ಯತೆ ನೀಡಲಾಗುತ್ತದೆ. ಸರ್ಕಾರದ ರೋಸ್ಟರ್‌ ಪದ್ಧತಿಯಂತೆ ಮೀಸಲಾತಿ ನಿಯಮ ಅನುಸರಿಸಲಾಗುತ್ತದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮಾ.23 ರಿಂದ ಏ.04ರವೆರೆಗೆ ಇರಲಿದೆ. ಆಸಕ್ತರು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kearecruitment_dpharma/forms/login.aspxಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment