PSI Exam Hall Ticket 2024(OUT): ಪಿಎಸ್ಐ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ!

Published on:

ಫಾಲೋ ಮಾಡಿ
PSI Exam Hall Ticket 2024
PSI Exam Hall Ticket 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಪೊಲೀಸ್ ಇಲಾಖೆಯ ನಾಗರಿಕ ಪೊಲೀಸ್ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸುತ್ತಿದ್ದು, ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಪ್ರಾಧಿಕಾರವು ತನ್ನ ವೆಬ್ ಸೈಟ್ ನಲ್ಲಿ ಇಂದು ಪ್ರಕಟಿಸಿದೆ.

ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್(PSI) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 402 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನಡೆಸುತ್ತಿದೆ. ಅಕ್ಟೋಬರ್ 03ರಂದು ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಅಂದು ಪತ್ರಿಕೆ-1 ಬೆಳಗ್ಗೆ 10:30 ರಿಂದ 12 ಗಂಟೆವರೆಗೆ 50 ಅಂಕಗಳಿಗೆ‌ ನಡೆಯಲಿದೆ. ನಂತರ ಪರೀಕ್ಷೆ-2 12:30 ರಿಂದ ಎರಡು ಗಂಟೆವರೆಗೆ 150 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಗೆ ಪ್ರವೇಶ ಪತ್ರವು ಕಡ್ಡಾಯವಾಗಿದ್ದು, ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರಗಳು ಮತ್ತು ಅಭ್ಯರ್ಥಿಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment