ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಖಾಲಿ ಇರುವ 140 ಶಿಕ್ಷಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಉಳಿಕೆ ಮೂಲ ವೃಂದದ 100 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದದ 40 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ಪ್ರಕ್ರಿಯೆ ನಡೆಯಲಿದೆ. ಡಿ.ಇಎಲ್.ಎಡ್, ಡಿ.ಎಡ್, ಬಿ.ಎಡ್ ಜೊತೆಗೆ ಟಿಇಟಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ https://kearecruitment.karnataka.gov.in/SWRT_2026/Account/Login ಮೂಲಕ ಸೆ.18ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ- ಆಗಸ್ಟ್ 21
- ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 18
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 19
ಶೈಕ್ಷಣಿಕ ಅರ್ಹತೆ:
ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗೆ ಪಿಯುಸಿ (PUC) ಉತ್ತೀರ್ಣತೆ ಮತ್ತು 2 ವರ್ಷಗಳ ಡಿಪ್ಲೊಮಾ ಇನ್ ಎಲಿಮೆಂಟರಿ ಎಜುಕೇಶನ್ (D.El.Ed).
ಅಥವಾ
ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗೆ ಪಿಯುಸಿ (PUC) ಮತ್ತು 4 ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್(B.ed).
ಅಥವಾ
ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗೆ ಪಿಯುಸಿ (PUC) ಮತ್ತು 2 ವರ್ಷಗಳ ಡಿಪ್ಲೊಮಾ ಇನ್ ಎಜುಕೇಶನ್(Special Education).
(ಗಮನಿಸಿ: ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಪಿಯುಸಿಯಲ್ಲಿ ಕನಿಷ್ಠ ಶೇಕಡಾ 45 ರಷ್ಟು ಅಂಕಗಳನ್ನು ನಿಗದಿಪಡಿಸಲಾಗಿದೆ).
ಜೊತೆಗೆ ಭಾರತ ಸರ್ಕಾರ ಅಥವಾ ಕರ್ನಾಟಕ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (KARTET/CTET) ಉತ್ತೀರ್ಣರಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು.
ಸರ್ಕಾರದ ಆದೇಶದಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದ್ದು, ಅದರ ಅನ್ವಯ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:
- ಸಾಮಾನ್ಯ ಅರ್ಹತೆ (GM) ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷಗಳು
- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷಗಳುಪರಿಶಿಷ್ಟ ಜಾತಿ (SC) / ಪರಿಶಿಷ್ಟ ಪಂಗಡ (ST) / ಪ್ರವರ್ಗ-1 ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷಗಳು
ವಿಶೇಷ ಚೇತನರು, ವಿಧವೆಯರು, ಮಾಜಿ ಸೈನಿಕರು ಮತ್ತು ಸರ್ಕಾರಿ ನೌಕರರಿಗೆ ನಿಯಮಾನುಸಾರ ಹೆಚ್ಚುವರಿ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ.
- ಸ್ಪರ್ಧಾತ್ಮಕ ಪರೀಕ್ಷೆ
- ದಾಖಲಾತಿ ಪರಿಶೀಲನೆ
ಸಂಬಳ:
ವೇತನ ಶ್ರೇಣಿ: ರೂ.41,300 ರಿಂದ 81,800 (2024ರ ಪರಿಷ್ಕೃತ ರಾಜ್ಯ ವೇತನ ಶ್ರೇಣಿಯ ಪ್ರಕಾರ). ಜೊತೆಗೆ ಪಿಂಚಣಿ ಸೌಲಭ್ಯ ಒಳಗೊಂಡಿದೆ.
ಅರ್ಜಿ ಶುಲ್ಕ:
- ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು(2ಎ, 2ಬಿ, 3ಎ, 3ಬಿ): ರೂ. 750/- (ರೂ.500 ಅರ್ಜಿ ಶುಲ್ಕ + ರೂ.250 ಪ್ರಕ್ರಿಯೆ ಶುಲ್ಕ)
- ಪ.ಜಾತಿ(SC)/ಪ.ಪಂಗಡ (ST)/ಪ್ರವರ್ಗ-1/ಮಾಜಿ ಸೈನಿಕ/ತೃತೀಯ ಲಿಂಗದ ಅಭ್ಯರ್ಥಿಗಳಿಗೆ ರೂ.500/- (ರೂ.250 ಅರ್ಜಿ ಶುಲ್ಕ + ರೂ.250 ಪ್ರಕ್ರಿಯೆ ಶುಲ್ಕ)
- ವಿಶೇಷ ಚೇತನ ಅಭ್ಯರ್ಥಿಗಳಿಗೆ: ರೂ.250/- (ಕೇವಲ ಪ್ರಕ್ರಿಯೆ ಶುಲ್ಕ)
ಅರ್ಜಿ ಹೇಗೆ ಸಲ್ಲಿಸುವುದು?
ಹಂತ-1 ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ.
ಹಂತ-2 ಮುಖಪುಟದ “ನೇಮಕಾತಿ” ವಿಭಾಗದಡಿ ನೀಡಲಾದ “ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿ – 2026” ತಾವು ಅರ್ಜಿ ಸಲ್ಲಿಸಲು ಇಚ್ಛಿಸುವ ಕೆಕೆ(KK) ಅಥವಾ ಆರ್‌ಪಿಸಿ(RPC) ವೃಂದದ ಮೇಲೆ ಕ್ಲಿಕ್ಕಿಸಿ.
ಹಂತ-3 ನಂತರ “SWRST – 2026 ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್ (RPC).24-08-2026” ಶೀರ್ಷಿಕೆಯ ಲಿಂಕ್ ಮೇಲೆ ಕ್ಲಿಕ್ಕಿಸಿ.
ಹಂತ-4 ತದನಂತರ ಹೊಸಪುಟ ತೆರೆಯುತ್ತದೆ. ಅಲ್ಲಿ ಹೊಸ ಅಭ್ಯರ್ಥಿಗಳಾಗಿದ್ದಲ್ಲಿ “ಡಿಜಿಲಾಕರ್ ಮೂಲಕ ನೋಂದಾಯಿಸಿ / Register via DigiLocker” ಮೇಲೆ ಒತ್ತುವ ಮೂಲಕ ನೋಂದಾಯಿಸಿಕೊಂಡು, “ಬಳಕೆದಾರ ಹೆಸರು/Username” ಮೂಲಕ ಲಾಗಿನ್ ಆಗಿ, ಅರ್ಜಿ ನಮೂನೆ ಭರ್ತಿ ಮಾಡಿ.
ಹಂತ-5 ಕೊನೆಗೆ ತಮಗೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ಲಿಂಕ್‌ಗಳು:
| ಅಧಿಕೃತ ಅಧಿಸೂಚನೆ(ಕೆಕೆ) ಪಿಡಿಎಫ್ | ಡೌನ್ಲೋಡ್ ಮಾಡಿ |
| ಅಧಿಕೃತ ಅಧಿಸೂಚನೆ(ಆರ್‌ಪಿಸಿ) ಪಿಡಿಎಫ್ | ಡೌನ್ಲೋಡ್ ಮಾಡಿ |
| ಆರ್‌ಪಿಸಿ ಹುದ್ದೆಗಳ ವರ್ಗೀಕರಣ ಪಿಡಿಎಫ್ | ಡೌನ್ಲೋಡ್ ಮಾಡಿ |
| ಕೆಕೆ ಹುದ್ದೆಗಳ ವರ್ಗೀಕರಣ ಪಿಡಿಎಫ್ | ಡೌನ್ಲೋಡ್ ಮಾಡಿ |
| ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್ | ಅರ್ಜಿ ಸಲ್ಲಿಸಿ |
| ಅಧಿಕೃತ ಜಾಲತಾಣ | kea.kar.nic.in |
| ಮತ್ತಷ್ಟು ಸುದ್ದಿಗಳಿಗಾಗಿ | ಕರ್ನಾಟಕಹೆಲ್ಪ್.ಇನ್ |
Please send us further details I am interested ma bed with 16 years experience