ಸ್ಪರ್ಧಾರ್ಥಿಗಳ ಗಮನಕ್ಕೆ: KEA ಅಂತಿಮ ಅಂಕಪಟ್ಟಿ ಪ್ರಕಟ

Published on:

ಫಾಲೋ ಮಾಡಿ
KEA Various Department Posts Compulsory Kannada Exam Final Score List 2026
KEA ಕಡ್ಡಾಯ ಕನ್ನಡ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟ

ವಿವಿಧ ಇಲಾಖೆ/ಸಂಸ್ಥೆ/ಮಂಡಳಿಗಳ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.28ರಂದು ನಡೆಸಿದ್ದ ಕಡ್ಡಾಯ ಕನ್ನಡ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

ಜ.01ರಂದು ತಾತ್ಕಾಲಿಕ ಅಂಕಪಟ್ಟಿ ಬಿಡುಗಡೆಗೊಳಿಸಿ, ಜ.02ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದರಂತೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ಅಂಕಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ಜಾಲತಾಣhttps://cetonline.karnataka.gov.in/kea/ದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಡೌನ್ಲೋಡ್‌ ಮಾಡಕೊಳ್ಳಬಹುದುದಾಗಿದೆ. ಸದರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ, ಪರೀಕ್ಷೆಗೆ ಹಾಜರಾಗದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಕೈಬಿಡಲಾಗುವುದು ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment