ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ/ಸಂಸ್ಥೆ/ನಿಗಮ/ಮಂಡಳಿಯ ಕಲ್ಯಾಣ ಕರ್ನಾಟಕ ಮತ್ತು ಮೂಲ ಉಳಿಕೆ ವೃಂದದ ವಿವಿಧ ಹುದ್ದೆಗಳ ಭರ್ತಿಗಾಗಿ ನಡೆಸಲಿರುವ ಕನ್ನಡ ಭಾಷಾ ಅರ್ಹತಾ ಪರೀಕ್ಷೆಯ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.
ಅಕ್ಟೋಬರ್ 08, 31 ಮತ್ತು ನ.15 ರಂದು ಅಧಿಸೂಚಿತ ಹುದ್ದೆಗಳಿಗೆ ಸಂಬಂಧಿಸಿದಂತೆ ಡಿ.28ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಅರ್ಹತಾ ಪರೀಕ್ಷೆ ನಡೆಸಲಾಗುತ್ತಿದೆ. ಒಟ್ಟು 100 ಪ್ರಶ್ನೆಗಳು ಪ್ರತಿ ಪ್ರಶ್ನೆಗೆ ತಲಾ 1.5ರಂತೆ ಅಂಕಗಳಿದ್ದು, ಒಟ್ಟು 150 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸುವುದು ಕಡ್ಡಾಯ.
ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಅಥವಾ ಎಸ್ಸೆಸ್ಸೆಲ್ಸಿಗಿಂತ ಉನ್ನತ ಮಟ್ಟದ ಪರೀಕ್ಷೆಗಳಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಥವಾ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿರುವ ಅಥವಾ ಆಯೋಗ, ಆಯ್ಕೆ ಪ್ರಾಧಿಕಾರ ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸದರಿ ಪರೀಕ್ಷೆಯಿಂದ ಮಿನಾಯಿತಿ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿಗಳಿಗಾಗಿ KarnatakaHelp.inಗೆ ಭೇಟಿ ನೀಡಿ.