ವಿವಿಧ ಇಲಾಖೆ/ನಿಗಮ/ಸಂಸ್ಥೆಗಳಲ್ಲಿ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಡಿ ಖಾಲಿ ಇರುವ 752 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ.
ಉಳಿಕೆ ವೃಂದದಲ್ಲಿ 420 ಹುದ್ದೆಗಳು ಮತ್ತು ಕ.ಕ ವೃಂದದಲ್ಲಿ 332 ಹುದ್ದೆಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ನ ಮೂಲಕ ಅ.9 ರಿಂದ ನ.14ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – ಅಕ್ಟೋಬರ್ 09, 2025 (ನವೆಂಬರ್ 01)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ – ನವೆಂಬರ್ 14, 2025 (NHK – ನವೆಂಬರ್ 14)
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನ – ನವೆಂಬರ್ 15, 2025 (NHK – ನ.15)
ಖಾಲಿ ಹುದ್ದೆಗಳ ವಿವರ:
ನಿಗಮ/ಸಂಸ್ಥೆ/ಇಲಾಖೆ
ಉಳಿಕೆ ವೃಂದದ ಹುದ್ದೆಗಳ ಸಂಖ್ಯೆ
ಕ.ಕ ವೃಂದದ ಹುದ್ದೆಗಳ ಸಂಖ್ಯೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
18
7
ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್
14
14
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
40
4
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
63
253
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
19
—-
ಕೃಷಿ ಮಾರಾಟ ಇಲಾಖೆ
180
—-
ತಾಂತ್ರಿಕ ಶಿಕ್ಷಣ ಇಲಾಖೆ
50
43
ಶಾಲಾ ಶಿಕ್ಷಣ ಇಲಾಖೆ(ಪ.ಪೂ)
10
—-
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
33
11
ಶೈಕ್ಷಣಿಕ ಅರ್ಹತೆ:
ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಅಭ್ಯರ್ಥಿಯು ಪದವಿ, ಪಿಯುಸಿ, ಮೂರು ವರ್ಷದ ಡಿಪ್ಲೊಮಾ/ ಐಟಿಐ/ ಬಿ.ಇ/ಬಿ.ಟೆಕ್/ ಬಿ.ಎಸ್ಸಿ/ಎಂ.ಎಸ್ಸಿ/ಸಂಬಂಧಿಸಿದ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ನಿರ್ವಾಹಕ ಹುದ್ದೆಗೆ – ಪಿಯುಸಿ/ಡಿಪ್ಲೊಮಾ ಜೊತೆಗೆ ಮೋಟಾರು ವಾಹನ ಕಂಡಕ್ಟರ್ ಪರವಾನಿಗಿ ಮತ್ತು ಬ್ಯಾಡ್ಜ್ ಹೊಂದಿರುವುದು ಕಡ್ಡಾಯ.
ಗಮನಿಸಿ: ಹುದ್ದೆಗಳ ಆಧಾರಿತವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿರಿ. ಈ ಸುದ್ದಿಯ ಕೊನೆಯಲ್ಲಿ Important Direct Links ಶೀರ್ಷಿಕೆಯಡಿ ನೀಡಲಾಗಿದೆ
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ ಈ ಕೆಳಗಿನಂತಿದೆ;
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – 38 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 41 ವರ್ಷಗಳು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ – 43 ವರ್ಷಗಳು
ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಪರೀಕ್ಷೆ
ದಾಖಲಾತಿ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (-2ಎ /2ಬಿ/3ಎ / 3ಬಿ) – 750/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು – ರೂ. 500 /- ವಿಶೇಷ ಚೇತನ ಅಭ್ಯರ್ಥಿಗಳು – 250/-
How to Apply for KEA Recruitment 2025
ಹಂತ – 1 ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/indexnewಕ್ಕೆ ಭೇಟಿ ನೀಡಿ
ಹಂತ – 2 ನಂತರ “ನೇಮಕಾತಿ” → “ವಿವಿಧ ಇಲಾಖೆಗಳ ನೇಮಕಾತಿ – 2025” ವಿಭಾಗದಲ್ಲಿ
→ ವಿವಿಧ ಇಲಾಖೆಗಳ ನೇಮಕಾತಿ (HK) – 2025
→ ವಿವಿಧ ಇಲಾಖೆಗಳ ನೇಮಕಾತಿ(NON-HK) – 2025
ಅಲ್ಲಿ ನೀಡಲಾದ “ಆನ್‌ಲೈನ್ ಅರ್ಜಿ ಸಲ್ಲಿಕೆ” ಲಿಂಕ್ ಒತ್ತಿ.
Kea 708 Various Posts Online Form 2025-26
ಹಂತ – 3 ಮುಂದೆ ಅಲ್ಲಿ ನೀಡಲಾದ ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.
Important Direct Links:
KEA Recruitment 2025 Last Date Extended Notice (Dated on 31/10/2025)
ನಾನು 2021 ರಿಂದ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ತೊಡಗಿಕೊಂಡಿರುವೆ. ನಿಮಗೆ ಮಾಹಿತಿ(ಸುದ್ದಿ)ಯನ್ನು ತಲುಪಿಸುವ ಕಾರ್ಯ ಮಾಡುವುದೇ ನನ್ನ ಧ್ಯೇಯ. ಮಾಹಿತಿ ತಲುಪಿಸುವುದರ ಜೊತೆಗೆ ನಾನು ಕೂಡಾ ಹೊಸ ಹೊಸ ಮಾಹಿತಿಯನ್ನು ತಿಳಿದುಕೊಂಡಿದ್ದೇನೆ. ಈಗಲೂ ತಿಳಿದುಕೊಳ್ಳುತ್ತಲೇ ಇದ್ದೇನೆ. ನಿರಂತರ ಕಲಿಕೆಯಲ್ಲಿ ದೋಣಿ ಸಾಗುತ್ತಿದೆ.ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ.....
Nice
Very good
Very good
Nice
Nicejob
Good job
B com
Good job and good helping nature
Very good
How to apply