ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ; ಪ್ರವೇಶ ಪತ್ರ ಪ್ರಕಟ

Published on:

ಬೆಂಗಳೂರು ಸೆ.28: ರಾಜ್ಯ ಕಂದಾಯ ಇಲಾಖೆಯ ಉಳಿಕೆ ಮೂಲ ವೃಂದದಡಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅ.04ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಸೋಮವಾರ ಬಿಡುಗಡೆಗೊಳಿಸಿದೆ.

ಅಂದು ಬೆಳಗ್ಗೆ 10:30 ರಿಂದ 12:30ರವೆರೆಗೆ ಸಾಮಾನ್ಯ ಜ್ಞಾನ(ಜಿಕೆ) ಪತ್ರಿಕೆ -1 ಹಾಗೂ ಮಧ್ಯಾಹ್ನ 2:30 ರಿಂದ 4:30ರವರೆಗೆ ಕನ್ನಡ, ಇಂಗ್ಲೀಷ್‌ ಹಾಗೂ ಕಂಪ್ಯೂಟರ್‌ ಜ್ಞಾನ ವಿಷಯಗಳನ್ನೊಳಗೊಂಡ ಪತ್ರಿಕೆ-2 ಪರೀಕ್ಷೆಗಳು ರಾಜ್ಯದ ನಾನಾ ಪರೀಕ್ಷಾ ಕೇಂದ್ರದಲ್ಲಿ ಆಫ್‌ಲೈನ್‌ ಮೋಡ್‌ನಲ್ಲಿ ನಡೆಯಲಿದೆ

ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರಾಧಿಕಾರದಲ್ಲಿ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಲಿಂಕ್‌ https://www.cetonline.karnataka.gov.in/KEA_EXAM_PORTAL/Forms/Candidates/Login ಮೂಲಕ ತಮ್ಮ ಅರ್ಜಿ ನಮೂನೆ ಸಂಖ್ಯೆ(ಅಪ್ಲಿಕೇಶನ್‌ ನಂಬರ) ಹಾಗೂ ಜನ್ಮ ದಿನಾಂಕ ನಮೂದಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು.

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment