ಭಾರತದಲ್ಲಿನ ಸಮುದಾಯಗಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಸಂಸ್ಥೆಯಾಗಿರುವ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)ನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕು ಸಂಯೋಜಕರು, ಜಿಲ್ಲಾ ನಾಯಕ ಹಾಗೂ ಕ್ಷೇತ್ರ ಸಂಶೋಧನಾ ತನಿಖಾಧಿಕಾರಿಗಳು ಸೇರಿದಂತೆ ಒಟ್ಟು 09 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಪ್ರಕ್ರಿಯೆಗಾಗಿ ಅಧಿಸೂಚಿಸಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ನ.16ರೊಳಗೆ KHPT ಅಧಿಕೃತ ಜಾಲತಾಣ https://www.khpt.org/work-with-us/vacancies-form/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 16, 2025
ಹುದ್ದೆಗಳ ವಿವರ ಹಾಗೂ ಶೈಕ್ಷಣಿಕ ಅರ್ಹತೆ:
✓ ತಾಲೂಕು ಸಂಯೋಜಕರು (02) ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆರೋಗ್ಯ, ಪೋಷಣೆ, ಸಮಾಜ ಕಾರ್ಯ ಅಥವಾ ಸಂಬಂಧಿತ ವಿಭಾಗಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
✓ ಜಿಲ್ಲಾ ಲೀಡ್[District Lead] (01) ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆರೋಗ್ಯ, ಪೋಷಣೆ, ಸಮಾಜ ವಿಜ್ಞಾನ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
✓ ಕ್ಷೇತ್ರ ಸಂಶೋಧನಾ ತನಿಖಾಧಿಕಾರಿಗಳು (06) ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಮಾಜ ಕಾರ್ಯ, ಪೋಷಣೆ, ಸಮಾಜ ವಿಜ್ಞಾನ, ಸಾರ್ವಜನಿಕ ಆರೋಗ್ಯ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಗಮನಿಸಿ: ವಿದ್ಯಾರ್ಹತೆಯ ಜೊತೆಗೆ ನಿಗದಿತ ಕೆಲಸದ ಅನುಭವ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿರಿ.
ವಯೋಮಿತಿ:
KHPT ನಿಯಮಗಳ ಪ್ರಕಾರ
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳ ಕಿರುಪಟ್ಟಿ ಅನುಭವ (ಸಂಬಂಧಿತ ಕೆಲಸದ ಕುರಿತು ವ್ಯಾಪಕ ಜ್ಞಾನ) ಸಂದರ್ಶನ
ಸಂಬಳ:
ಅಭ್ಯರ್ಥಿಗಳ ಅನುಭವ, ಬಜೆಟ್ ಲಭ್ಯತೆ, ಆಂತರಿಕ ಸಮಾನತೆ ಮತ್ತು ಸಂದರ್ಶನದ ಕಾರ್ಯಕ್ಷಮತೆಯ ಆಧಾರದ ಮೇಲೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅಭ್ಯರ್ಥಿಗಳ ಗಮನಕ್ಕೆ: ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಮತ್ತು ಅಗತ್ಯವಿರುವ ಅನುಭವ ಮತ್ತು ಕೌಶಲ್ಯಗಳನ್ನು ಹೊಂದಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಮೊದಲಿಗೆ KHPT ಅಧಿಕೃತ ಜಾಲತಾಣ https://www.khpt.org/work-with-us/ ಕ್ಕೆ ಭೇಟಿ ನೀಡಿ.
• ಪ್ರಸ್ತುತ ಹುದ್ದೆಗಳು ವಿಭಾಗದ ಕೆಳಗೆ ನೀಡಲಾಗಿರುವ – ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
• ನಂತರ “ಈಗಲೇ ಅನ್ವಯಿಸು” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಮೂಲ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
KHPT Koppal Taluka CoordinatorOfficial Notification PDF Link