ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯ ಅಧೀನದ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ(KITS)ನಲ್ಲಿ ವಿವಿಧ ಸಹಾಯಕ ವ್ಯವಸ್ಥಾಪಕ(ಮಾನವ ಸಂಪನ್ಮೂಲ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ವ್ಯವಸ್ಥಾಪಕ(ಬಿಟಿ), ಸಹಾಯಕ ವ್ಯವಸ್ಥಾಪಕ(ಐಟಿ), ಸಹಾಯಕ ವ್ಯವಸ್ಥಾಪಕ(ಸ್ಟಾರ್ಟ್‌ಅಪ್ಸ್) ಹುದ್ದೆಗಳಿಗೆ ತಲಾ ಒಂದರಂತೆ ಒಟ್ಟು 03 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ 11 ತಿಂಗಳ ಅವಧಿಯವರೆಗೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಐಟಿಬಿಟಿ ಅಧಿಕೃತ ಜಾಲತಾಣ https://eitbt.karnataka.gov.in/217/recruitment/kn ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಕಿಟ್ಸ್ ವಸ್ಥಾಪಕ ನಿರ್ದೇಶಕರು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಡಿಸೆಂಬರ್ 31, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 20, 2026
ಶೈಕ್ಷಣಿಕ ಅರ್ಹತೆ:
✓ ಸಹಾಯಕ ವ್ಯವಸ್ಥಾಪಕರು (ಬಿಟಿ) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಜೈವಿಕ ತಂತ್ರಜ್ಞಾನದಲ್ಲಿ ಬಿಇ/ಜೈವಿಕ ತಂತ್ರಜ್ಞಾನ ಅಥವಾ ಜೀವ ವಿಜ್ಞಾನ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ 3 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು.
✓ ಸಹಾಯಕ ವ್ಯವಸ್ಥಾಪಕರು (ಐಟಿ) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಂಬಿಎ/ಪಿಜಿಡಿಎಂ/ಪಿಜಿಡಿಬಿಎ ಅಥವಾ ಬಿಇ/ಬಿಎಸ್ಸಿ/ಎಂ.ಎಸ್.ಸಿ/ಬಿ.ಕಾಂ/ಎಂಕಾಂ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ 3 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು.
✓ ಸಹಾಯಕ ವ್ಯವಸ್ಥಾಪಕರು (ಸ್ಟಾರ್ಟ್ ಆಪ್ಸ್) ಹುದ್ದೆಗೆ; ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಇಂಜಿನಿಯರಿಂಗ್/ವಿಜ್ಞಾನ/ನಿರ್ವಹಣೆ ಅಥವಾ ತತ್ಸಮಾನದಲ್ಲಿ ಪದವಿ ಅಥವಾ ನಿರ್ವಹಣೆ, ಸಾರ್ವಜನಿಕ ನೀತಿ ಅಥವಾ ತತ್ಸಮಾನದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ 3 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು.
ವಯೋಮಿತಿ:
20-01-2026 ರಂತೆ;
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಆಯ್ಕೆ ವಿಧಾನ:
ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ನಿಯಮಗಳ ಅನುಸಾರ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 45,000ರೂ. ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ
• ಮೊದಲಿಗೆ ಅಭ್ಯರ್ಥಿಗಳು EITBT ಅಧಿಕೃತ ಜಾಲತಾಣ https://eitbt.karnataka.gov.in/217/recruitment/kn ಕ್ಕೆ ಭೇಟಿ ನೀಡಿ.
• ನಂತರ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯ ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | eitbt.karnataka.gov.in |
| More Updates | KarnatakaHelp.in |