KLA ReporterRecruitment 2024: ಕರ್ನಾಟಕ ವಿಧಾನಸಭೆ ಸಚಿವಾಲಯವು ಮಾತೃ ವೃಂದ ಮತ್ತು ಸ್ಥಳೀಯ ವೃಂದದಲ್ಲಿ (ಕಲ್ಯಾಣ-ಕರ್ನಾಟಕ ಪ್ರದೇಶಕ್ಕೆ ಮಾತ್ರ) ಒಟ್ಟು 6 ವರದಿಗಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಕೊನೆಯ ದಿನಾಂಕ 2024 ರ ಏಪ್ರಿಲ್ 25 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಢಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Karnataka Legislative Assembly Post Name – Reporter Total Vacancy – 6 Application Process: Offline Job Location – Bengaluru
Kla Reporter Recruitment 2024
Qualification, Age Limit, Application Fee and Selection Process Details
Important Dates:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2024
Vacancy Details:
ಒಟ್ಟು 06 ಹುದ್ದೆಗಳು ಕನ್ನಡ ವರದಿಗಾರರು- 5 ಆಂಗ್ಲ ವರದಿಗಾರರು- 1
ಶೈಕ್ಷಣಿಕ ಅರ್ಹತೆ:
ಪದವಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ಕನ್ನಡ ಭಾಷೆಯಲ್ಲಿ ವರದಿ ಬರೆಯುವ ಮತ್ತು ಮಾತನಾಡುವಲ್ಲಿ ಪರಿಣತಿ ಹೊಂದಿರಬೇಕು.
ಕಂಪ್ಯೂಟರ್ ಜ್ಞಾನ ಮತ್ತು ಮೂಲಭೂತ ಶಾರ್ಟ್‌ಹ್ಯಾಂಡ್ ಅರಿವು ಅಗತ್ಯ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಅಥವಾ
ಮೌಖಿಕ ಪರೀಕ್ಷೆ
ವೇತನ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,900 ರಿಂದ ರೂ. 70,850 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕದ ವಿವರ:
ಪ. ಜಾತಿ, ಪ. ಪಂ ಹಾಗೂ ಪ್ರ1 ರ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅಂಚೆ ಕಚೇರಿಯ ಚಲನ್ ಮೂಲಕ ಪಾವತಿಸಬಹುದು.
How to Apply Karnataka Legislative Assembly Recruitment 2024
ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಅಭ್ಯರ್ಥಿಗಳು ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧಿಕೃತ ಜಾಲತಾಣದಿಂದ ಅರ್ಜಿ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಸಲ್ಲಿಸಬಹುದು.
ಅರ್ಜಿ ಶುಲ್ಕವನ್ನು ಡಿಡಿ ರೂಪದಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಹೆಸರಿಗೆ ಚಾಲನೆಯಲ್ಲಿರುವ ಯಾವುದೇ ರಾಷ್ಟ್ರೀಯ ಬ್ಯಾಂಕಿನ ಶಾಖೆಗೆ ಪಾವತಿಸಬೇಕು.
ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದುಕೊಳ್ಳಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು)
ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ)
ಕೊನೆಯದಾಗಿ, ಅರ್ಜಿ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ/ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
ಅರ್ಜಿ ಸಲ್ಲಿಸುವ ವಿಳಾಸ: ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001
ಹೆಚ್ಚಿನ ಮಾಹಿತಿಗಾಗಿ:
ಅಭ್ಯರ್ಥಿಗಳು ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬಹುದು ಅಥವಾ 080-2223-4444 ಗೆ ಕರೆ ಮಾಡಬಹುದು.