ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ: ಅರ್ಹರು ಹೀಗೆ ಅರ್ಜಿ ಸಲ್ಲಿಸಿ

Published on:

ಫಾಲೋ ಮಾಡಿ
Karnataka Labour Welfare Board Educational Assistance Online Application 2025-26
Karnataka Labour Welfare Board Educational Assistance 2025-26

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2025-26ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‌ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಹಾಗೂ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಶೇ.45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಅಂತಹ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ ಸೈಟ್ https://klwbapps.karnataka.gov.in/ಗೆ ಭೇಟಿ ನೀಡಿ. ಡಿ.31ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಮಂಡಳಿಯ ಕಲ್ಯಾಣ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment